ಹದಿಹರೆಯದಲ್ಲಿ ಮನಸ್ಸು ಸದಾ ಚಂಚಲ: ಸೂನಾ ಕಮಲ್ ಬಾಬು

KannadaprabhaNewsNetwork |  
Published : Mar 29, 2024, 12:48 AM IST
ನರಸಿಂಹರಾಜಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಅಂತರಾಷ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಆಸ್ಪತ್ರೆಯ  ಸ್ಟಾಪ್‌ ನರ್ಸಿಂಗ್‌ ಆಫೀಸರ್ ಸೂನಾ ಕಮಲ್‌ ಬಾಬು ಮಾತನಾಡಿದರು.ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ, ತಾ.ಕ.ಸಾ.ಪ ಅಧ್ಯಕ್ಷ ಪೂರ್ಣೇಶ್ ಮತ್ತಿತರರು ಇದ್ದರು | Kannada Prabha

ಸಾರಾಂಶ

ನರಸಿಂಹರಾಜಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳ ಎಂಬ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಹದಿ ಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಮನಸ್ಸು ಸದಾ ಚಂಚಲವಾಗಿರುತ್ತದೆ ಎಂದು ತಾಲೂಕು ಸರ್ಕಾರಿ ಆಸ್ಪತ್ರೆಯ ನರ್ಸರಿ ಸ್ಟಾಪ್‌ ನರ್ಸಿಂಗ್ ಆಫೀಸರ್ ಸೂನಾ ಕಮಲ್ ಬಾಬು ತಿಳಿಸಿದರು.

ಅವರು ಗುರುವಾರ ಪಟ್ಟಣದ ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ಏರ್ಪಡಿಸಿದ್ದ ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳ ಎಂಬ ಬಗ್ಗೆ ಉಪನ್ಯಾಸ ನೀಡಿದರು.ಬಾಲ್ಯಾವಸ್ಥೆಯಿಂದ ಪ್ರೌಢಾವಸ್ಥೆಗೆ ಬರುವ ಸಮಯದಲ್ಲಿ ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಕಂಡು ಬಂದರೂ ತಮ್ಮ ತಂದೆ, ತಾಯಿಯಲ್ಲಿ ಅಥವಾ ಶಿಕ್ಷಕರಲ್ಲಿ ಹೇಳಿಕೊಳ್ಳಬೇಕು. ಆರೋಗ್ಯವೇ ಭಾಗ್ಯವಾಗಿದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್‌ ಆಶಯ ಭಾಷಣ ಮಾಡಿ, ಕೇವಳ ಮಾರ್ಚ್‌ ತಿಂಗಳಿಗೆ ಮಾತ್ರ ಮಹಿಳಾ ದಿನಾಚರಣೆ ಸೀಮತ ವಾಗಬಾರದು ಎಂದರಲ್ಲದೆ, ತಾಯಿಯಾಗಿ, ತಂಗಿಯಾಗಿ, ಪತ್ನಿಯಾಗಿ ಮಹಿಳೆಯು ಅನೇಕ ಪಾತ್ರಗಳನ್ನು ಯಶಸ್ವಿಯಾಗಿ ನಿರ್ಹಹಿಸಿದ್ದಾಳೆ. ಇಂದು ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರ ಸಾಧನೆ ಗಮನ ಸೆಳೆಯುತ್ತಿದೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ರಜಾ ಸಮಯವನ್ನು ವ್ಯರ್ಥ ಮಾಡದೆ ಕಥೆ, ಕಾದಂಬರಿ ಹಾಗೂ ಇತರ ಮಕ್ಕಳ ಪುಸ್ತಕಗಳನ್ನು ಓದಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಕ ಗುಣಪಾಲ್ ಜೈನ್‌ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಗಳಾಗಿ ಸಾಹಿತಿ ಜಯಮ್ಮ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಜಾನಪದ ಕಲಾವಿದೆ, ಅಂಗನವಾಡಿ ಕಾರ್ಯಕರ್ತೆ ಕೆ.ಎಚ್.ಮಂಜುಳಾ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದಿಂದ ಸನ್ಮಾನಿಸಲಾಯಿತು. ವಸಂತಿ ಸ್ವಾಗತಿಸಿದರು. ಭಾನುಮತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಬಸವಣ್ಣ ಜೀವ ವೈವಿಧ್ಯ ಉದ್ಯಾನವನ
ಕೆಎಂಎಫ್‌ನಲ್ಲಿ ಉದ್ಯೋಗದ ನೆಪದಲ್ಲಿ50 ಲಕ್ಷ ವಂಚನೆ:ಇಬ್ಬರ ವಿರುದ್ಧ ಕೇಸ್‌