ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ

KannadaprabhaNewsNetwork |  
Published : Dec 22, 2023, 01:30 AM IST
ವಿಮಾನ | Kannada Prabha

ಸಾರಾಂಶ

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57 ಸರ್ವೆ ನಂಬರ್‌ನಲ್ಲಿ ಒಟ್ಟು 157.93 ಎಕ್ರೆ ಜಮೀನನ್ನು ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಸದ್ರಿ ಜಮೀನಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ತಾಲೂಕಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕಾರ್ಯಕ್ಕಾಗಿ ಸರ್ವೆ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಗುರುವಾರ ಧರ್ಮಸ್ಥಳ ಸನಿಹದ ಕನ್ಯಾಡಿ ಹಾಗೂ ಕಲ್ಮಂಜ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57 ಸರ್ವೆ ನಂಬರ್‌ನಲ್ಲಿ ಒಟ್ಟು 157.93 ಎಕ್ರೆ ಜಮೀನನ್ನು ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಸದ್ರಿ ಜಮೀನಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಮಿನಿ ವಿಮಾನ ನಿಲ್ದಾಣಕ್ಕೆಂದು ಗುರುತಿಸಲಾಗಿರುವ ಜಾಗ ಏರು ತಗ್ಗುಗಳಿಂದ ಕೂಡಿದ್ದಾಗಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡು ಬಂದಿದ್ದು, ಇದು ಬಹುತೇಕ ಅರಣ್ಯ ಇಲಾಖೆಯ ವಶದಲ್ಲಿರುವ ಅಕೇಶಿಯಾ ಹಾಗೂ ಇತರ ನೆಡುತೋಪುಗಳಾಗಿವೆ.

ಸರ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆಯ ಅಧಿಕಾರಿಗಳು, ಅರಣ್ಯ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಶೀಲನೆ ನಡೆಸಿದರು.ಕರ್ನಾಟಕ ಮಾಲಿನ್ಯ ನಿಯಂತ್ರಣ ಅಧಿಕಾರಿ ಡಾ.ರವಿ, ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ತೇಜಸ್ವಿ ಬಿ.ಆರ್., ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ದ್ವಿತೀಯಾ, ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ, ಭೂಮಾಪನ ಇಲಾಖೆಯ ಎಡಿಎಲ್‌ಆರ್ ರೇಣುಕಾ ನಾಯಕ್, ಡಿಡಿಎಲ್‌ಆರ್ ಪ್ರಸಾದಿನಿ, ಲೋಕೋಪಯೋಗಿ ಇಲಾಖೆಯ ಎಇಇ ಅಜಿತಾ, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ರಾಕೇಶ್, ಕಂದಾಯ ಇಲಾಖೆಯ ಆರ್‌ಐ ಪ್ರತೀಶ್ ಹಾಗೂ ಸ್ಥಳೀಯ ವಿಎಗಳು ಹಾಗೂ ಇತರರು ತಂಡದಲ್ಲಿದ್ದರು.ಮಿನಿವಿಮಾನ ನಿಲ್ದಾಣದ ಸ್ಥಳವನ್ನು ಅಂತಿಮ ಗೊಳಿಸುವ ಬಗ್ಗೆ ಮಂಗಳೂರಿನಲ್ಲಿ ಮುಂದಿನ ಸಭೆಗಳನ್ನು ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ