ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ: 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

KannadaprabhaNewsNetwork |  
Published : Apr 29, 2026, 01:45 AM IST
ಚಾಲಕನ ಅಚಾತುರ್ಯದಿಂದ ಗಾರ್ಮೆಂಟ್‌ ಬಸ್‌ ಪಲ್ಟಿ 15ಕ್ಕೂ ಹೆಚ್ಚುಮಂದಿಗೆ ಗಂಭೀರ ಗಾಯಗಳು | Kannada Prabha

ಸಾರಾಂಶ

ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ತೀವ್ರ ಗಾಯಗಳಾದ 8 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಗೌರಿಬಿದನೂರು: ತಾಲೂಕಿನ ವೇದಲವೇಣಿ ಸಮೀಪ ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿಯಾಗಿದ್ದು, 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರದ ಗಾರ್ಮೆಂಟ್ಸ್ ಒಂದಕ್ಕೆ ತೆರಳುತ್ತಿದ್ದ ಈ ಮಿನಿಬಸ್ ಚಾಲಕನ ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಪಕ್ಕ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಅಪಘಾತವಾದ ಬಸ್ಸಿನಲ್ಲಿ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ತೀವ್ರ ಗಾಯಗಳಾದ 8 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನೆ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಗಾರ್ಮೆಂಟ್ಸ್ ಕಾರ್ಮಿಕರು ತಮ್ಮ ಕೆಲಸದ ಸ್ಥಳಕ್ಕೆ ತೆರಳುತ್ತಿದ್ದ ವೇಳೆ ಮಿನಿ ಬಸ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆಯಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರು ನಿಗಾವಹಿಸಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅಪಘಾತವಾದ ಬಳಿಕ ಮಿನಿ ಬಸ್ ಚಾಲಕ ಅಭಿಷೇಕ್ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒತ್ತಡ ನಿರ್ವಹಣೆಗೆ ವ್ಯಕ್ತಿತ್ವ ವಿಕಸನ ಪೂರಕ
ಕನ್ನಡ ಪಠ್ಯಪುಸ್ತಕ ಸರಳೀಕರಣಕ್ಕೆ ಇಲಾಖೆ ಚಿಂತನೆ