ಕನ್ನಡಪ್ರಭ ವಾರ್ತೆ ಚಾಮರಾಜನಗರಡಿ.೨೩ರಂದು ಮೈಸೂರಿನ ಮುಕ್ತ ವಿಶ್ವವಿದ್ಯಾಲಯ ಶತಮಾನೋತ್ಸವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬೆಳಗ್ಗೆ ೧೧ ಗಂಟೆಗೆ ರೈತ ದಿನಾಚರಣೆ, ರೈತರ ಹಬ್ಬ, ರಾಜ್ಯಮಟ್ಟದ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾಮಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನವನ್ನು ಸೆಳೆಯಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ವಿ.ಸೋಮಣ್ಣ, ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಭಾಗವಹಿಸಲಿದ್ದಾರೆ ಎಂದರು. ಸಮಾವೇಶದಲ್ಲಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಲಿ. ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಆಗಲಿ. ಕೃಷಿ ಸಾಲ ನೀತಿ ಬದಲಾಗಲಿ, ಭೂಮಿ ಮೌಲ್ಯಕ್ಕೆ ಅನುಗುಣವಾಗಿ ಸಾಲ ನೀಡುವಂತಾಗಲಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್, ಕೃಷಿ ಭೂಮಿ ಮುಟ್ಟುಗೋಲು ಕಾಯ್ದೆ ರದ್ದಾಗಬೇಕು ಎಂದು ಆಗ್ರಹಿಸಿದರು.ಕೃಷಿ ಉಪಕರಣಗಳು ರಸಗೊಬ್ಬರ ಕೀಟನಾಶಕ, ಮೊಸರು ಮಜ್ಜಿಗೆ ಇತರೆ ಉತ್ಪನ್ನಗಳ ಮೇಲೆ ವಿಧಿಸಿರುವ ಜಿಎಸ್‌ಟಿ ಸುಂಕ ರದ್ದಾಗಲಿ. ಮಹಿಳಾ ಸಂಘಗಳಿಗೆ ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಿರುಕುಳ ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡಿ, ನಕಲಿ ಬಿತ್ತನೆ ಬೀಜ ನಕಲಿ ರಸಗೊಬ್ಬರ ನಕಲಿ ಕೀಟನಾಶಕ ಮಾರಾಟ ಮಾಡುವ ಅಂಗಡಿಗಳ ಮಾಲೀಕರ ವಿರುದ್ಧ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು ಎಂದರು. ಕೃಷಿ ಭೂಮಿ, ನೀರು ಅರಣ್ಯ ಪರಿಸರ ರಕ್ಷಿಸಲು ಜಲಾಶಯಗಳ, ಕೆರೆ ಕಟ್ಟೆಗಳ ಹೂಳು ತೆಗೆಸಲು ಕಾರ್ಯ ಯೋಜನೆ ಜಾರಿ ಮಾಡಿ, ಪರಿಸರ ಸಂರಕ್ಷಿಸಲು ಸಾವಿರಾರು ಮರ ಬೆಳೆಸಿದ ಕಂಪನಿ ಸಂಸ್ಥೆಗಳಿಗೆ ಶೇ.೨೫ ತೆರಿಗೆ ವಿನಾಯಿತಿ ನೀಡಬೇಕು. ಕಬ್ಬಿನ ಎಂಆರ್‌ಪಿ ದರ ರೈತರ ಹೊಲದಲ್ಲಿನ ದರ ಎಂದು ನಿಗದಿ ಮಾಡುವ ಮಾನದಂಡ ಜಾರಿಗೊಳಿಸಬೇಕು.