ಮರುಳಸಿದ್ದೇಶ್ವರ ಸನ್ನಿಧಿಯಲ್ಲಿ ಸಚಿವ ಬಸವಂತಪ್ಪ

KannadaprabhaNewsNetwork |  
Published : Sep 08, 2026, 02:00 AM IST
ಕ್ಯಾಪ್ಷನ7ಕೆಡಿವಿಜಿ38 ದಾವಣಗೆರೆ ತಾ. ತಾಲೂಕಿನ ಆನಗೋಡಿನ ಶ್ರೀ ವಿಶ್ವಬಂಧು ಮರುಳುಸಿದ್ದೇಶ್ವರ ದೇವಸ್ಥಾನದಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಭಾಗವಹಿಸಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು........ಕ್ಯಾಪ್ಷನ7ಕೆಡಿವಿಜಿ 39ದಾವಣಗೆರೆ ತಾ. ಆನಗೋಡು ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ದೇವಸ್ಥಾನದಲ್ಲಿ ಸಚಿವ ಕೆ.ಎಸ್‌.ಬಸವಂತಪ್ಪ ಪ್ರಸಾದ ಸ್ವೀಕರಿಸಿದರು. | Kannada Prabha

ಸಾರಾಂಶ

ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಸೋಮವಾರದ ಅಂಗವಾಗಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಭಾಗವಹಿಸಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಸುಖ, ಸಂತೋಷ, ನೆಮ್ಮದಿ, ಆರೋಗ್ಯ ಹಾಗೂ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

- ನೀರು ಮಿತ ಬಳಕೆಗೆ ಸಲಹೆ । ಪೈಪ್‌ಲೈನ್ ಕಾಮಗಾರಿ ಶೀಘ್ರ ಮುಗಿಸುವ ಭರವಸೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ತಾಲೂಕಿನ ಆನಗೋಡು ಗ್ರಾಮದ ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಸೋಮವಾರದ ಅಂಗವಾಗಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಭಾಗವಹಿಸಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಸುಖ, ಸಂತೋಷ, ನೆಮ್ಮದಿ, ಆರೋಗ್ಯ ಹಾಗೂ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ನಂತರ ದೇವಸ್ಥಾನ ಹಾಗೂ ಮಠದ ಆವರಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮರುಳುಸಿದ್ದೇಶ್ವರ ಸ್ವಾಮಿ ಆಶೀರ್ವಾದದಿಂದ ಈ ಭಾಗದ ರೈತರಿಗೆ ಒಳಿತಾಗಲಿ. ಮುಂದಿನ ಬೇಸಿಗೆ ದಿನಗಳಲ್ಲಿ ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ಸದ್ಬಳಕೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಹೀಗಾದಲ್ಲಿ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ಅಗತ್ಯತೆ ಪೂರೈಸಲು ಅನುಕೂಲವಾಗಲಿದೆ ಎಂದರು.

ಇದೇ ವೇಳೆ ಕ್ಷೇತ್ರದ ವ್ಯಾಪ್ತಿಯಲ್ಲಿ ಪೈಪ್‌ಲೈನ್ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಅಗತ್ಯ ನೀರಾವರಿ ಸೌಲಭ್ಯಗಳನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕ್ಷೇತ್ರದ ಶ್ರೇಯೋಭಿವೃದ್ಧಿ, ರೈತರ ಹಿತಾಸಕ್ತಿ ಹಾಗೂ ನೀರಾವರಿ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು. ಕ್ಷೇತ್ರದ ಭಕ್ತಾದಿಗಳು, ಸ್ಥಳೀಯ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ಬಳಿಕ ಭಕ್ತರು ಪ್ರಸಾದ ಸ್ವೀಕರಿಸಿದರು.

- - -

-7ಕೆಡಿವಿಜಿ38: ಆನಗೋಡಿನ ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ದೇವಸ್ಥಾನದಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಭಾಗವಹಿಸಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಮೆರಿಕನ್ನಡಿಗರ ಮಹೋತ್ಸವಕ್ಕೆ ಭಾವಪೂರ್ಣ ಮಂಗಳ
ಎಸ್ಸೆಸ್ಸೆಂ ಜನ್ಮದಿನ: 20ಕ್ಕೆ ರಾಷ್ಟ್ರಮಟ್ಟದ ರ‍್ಯಾಪಿಡ್ ಚೆಸ್ ಪಂದ್ಯಾವಳಿ