ಕೊಪ್ಪಳ: ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ಅಶುಚಿತ್ವ ಹಾಗೂ ಅವ್ಯವಸ್ಥೆ ಕಂಡು ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಸಂಸದ ಕೆ. ರಾಜಶೇಖರ ಹಿಟ್ನಾಳ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು, ದೇವಿಯ ದರ್ಶನದ ಬಳಿಕ ಆವರಣದ ವಿವಿಧೆಡೆ ಪರಿಶೀಲನೆ ನಡೆಸಿದರು. ಚರಂಡಿಗಳಲ್ಲಿ ಕಸ ಹಾಗೂ ಪಾಚಿ, ಭಕ್ತರ ಕೊಠಡಿಗಳ ಸುತ್ತಲಿನ ಅಶುಚಿತ್ವ ಕಂಡು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಶೌಚಾಲಯ ಹಾಗೂ ಪಾದರಕ್ಷೆ ಕೌಂಟರ್‌ನಲ್ಲಿ ಭಕ್ತರಿಂದ ಹೆಚ್ಚುವರಿ ಹಣ ಪಡೆಯದಂತೆ ಸೂಚಿಸಿದ ಸಚಿವರು, ದೇವಸ್ಥಾನವನ್ನು ಸ್ವಚ್ಛವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಸೇರಿದಂತೆ ಅಧಿಕಾರಿಗಳು ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಇದ್ದರು.