ಕನ್ನಡಪ್ರಭ ವಾರ್ತೆ ಕಮಲನಗರ
ಪಟ್ಟಣದ ರೇಲ್ವೆ ನಿಲ್ದಾಣದಲ್ಲಿ ಶನಿವಾರ ಸಂಜೆ ಲಾತೂರ-ಯಶವಂತಪೂರ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಕಮಲನಗರ ಗಡಿಭಾಗದ ತಾಲೂಕು ಕೇಂದ್ರವಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಾರೆ. ಈ ಹಿನ್ನೆಲೆ 3 ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಇಲಾಖೆ ಒಪ್ಪಿಗೆ ನೀಡಿದೆ. ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಜನರಲ್ಲಿ ವಿಶ್ವಾಸದ ಜೊತೆಗೆ ದೇಶದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದೆ ಎಂದರು.
ಬೀದರ್‌ನಿಂದ 13 ಹೊಸ ರೈಲು ಸಂಚಾರ ಮತ್ತು 12 ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇನ್ನುಳಿದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿವೆ ಎಂದು ತಿಳಿಸಿದರು.ಕಮಲನಗರ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ 30 ಕೋಟಿ ವೆಚ್ಚದಲ್ಲಿ ಗ್ರಿಡ್ ಪವರ್ ಸ್ಟೇಷನ್ ಸ್ಥಾಪಿಸಲಾಗುತ್ತಿದೆ. ಇದಲ್ಲದೇ ಹಂದಿಕೇರಾ ಕ್ರಾಸ್ ಬಳಿ 2000 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ಅನುಮೋದನೆ ದೊರಕಿದೆ. 10 ಸಾವಿರ ಕೋಟಿ ರು. ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಮುಂದಾಗಿವೆ. ಇದರಿಂದ 1500ಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ದೊರಕಲಿದೆ ಎಂದು ಹೇಳಿದರು.