ತುಮಕೂರು:ವಿಜಯದಶಮಿಯಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಶ್ರೀರಾಮ, ನೊಣವಿನಕೆರೆಯ ಲಕ್ಷ್ಮೀ ಹಾಗೂ ಕರಿಬಸವೇಶ್ವರ ಮಠದ ಲಕ್ಷ್ಮೀ ಸೇರಿದಂತೆ 3 ಆನೆಗಳಿಗೆ ನಗರದ ಬಿ.ಜಿ.ಎಸ್. ವೃತ್ತದ ಬಳಿ ಸಚಿವರು ಪೂಜೆ ಸಲ್ಲಿಸಿದರು. ನಂತರ ಗಜಪಡೆಯು ಬಿ.ಜಿ.ಎಸ್. ವೃತ್ತದಿಂದ ಚರ್ಚ್ ಸರ್ಕಲ್ ಮಾರ್ಗವಾಗಿ ಮತ್ತೆ ಬಿ.ಜಿ.ಎಸ್. ವೃತ್ತದವರೆಗೂ ಮೆರವಣಿಗೆಯ ತಾಲೀಮು ನಡೆಸಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ನಾಗಣ್ಣ, ಮತ್ತಿತರ ಅಧಿಕಾರಿ, ಸಾರ್ವಜನಿಕರು ಭಾಗವಹಿಸಿದ್ದರು.