700 ಅಹವಾಲು ಸ್ವೀಕರಿಸಿದ ಸಚಿವ ಡಾ: ಜಿ. ಪರಮೇಶ್ವರ

KannadaprabhaNewsNetwork |  
Published : Apr 09, 2026, 01:15 AM IST
್ಿಿ್ | Kannada Prabha

ಸಾರಾಂಶ

ಜನರ ಸಮಸ್ಯೆಗೆ ಸ್ಪಂದಿಸುವುದೇ ಒಳ್ಳೆಯ ಆಡಳಿತ, ಈ ನಿಟ್ಟಿನಲ್ಲಿ ಜನ ಸ್ಪಂದನ ಕಾರ್ಯಕ್ರಮದಲ್ಲಿ ಗರಿಷ್ಠ ಮಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರುಜನರ ಸಮಸ್ಯೆಗೆ ಸ್ಪಂದಿಸುವುದೇ ಒಳ್ಳೆಯ ಆಡಳಿತ, ಈ ನಿಟ್ಟಿನಲ್ಲಿ ಜನ ಸ್ಪಂದನ ಕಾರ್ಯಕ್ರಮದಲ್ಲಿ ಗರಿಷ್ಠ ಮಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಹೇಳಿದ್ದಾರೆ.ತುಮಕೂರು ಜಿಲ್ಲಾಡಳಿತದಿಂದ ಬುಧವಾರ ನಗರ ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಯಾರಿಗೆ ಸುದೀರ್ಘವಾದ ಸಮಸ್ಯೆಗಳಿರುತ್ತವೆ. ಅಂತಹ ಸಮಸ್ಯೆಗಳನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಯಾರ ಶಿಫಾರಸ್ಸು ನಡೆಯುವುದಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಕೆಲಸ ಮಾಡಲು ಆಗುವುದಿಲ್ಲ. ಸರ್ಕಾರ ಜನರ ಹತ್ತಿರ ಹೋಗಿ ಆಡಳಿತವನ್ನು ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಬೇಕು, ಸುಲಭವಾಗಿ ಸಿಗಬೇಕು ಎಂಬ ನಿಟ್ಟಿನಲ್ಲಿ ಜನಸಂದರ್ಶನ ಕಾರ್ಯಕ್ರಮ ಮಾಡಲಾಗಿದೆ.

ಜಿಲ್ಲಾಧಿಕಾರಿಗಳು ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಿದ್ದಾರೆ. ಎಲ್ಲ ತಾಲೂಕುಗಳಿಂದ 2500 ಅರ್ಜಿಗಳು ಬಂದಿವೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳು 15 ದಿವಸದೊಳಗೆ ಮಾಡಬೇಕು ಎಂದು ಸೂಚಿಸಿದಾಗ ಕೆಲಸಗಳು ಆಗುತ್ತವೆ. ನಿರ್ಲಕ್ಷ್ಯಕ್ಕೆ ಒಳಗಾಗಿ ಮೂಲೆಗುಂಪಾಗಿದ್ದ ಕೆಲಸಗಳು ಇಂದು ಪೂರ್ಣಗೊಂಡಿವೆ ಎಂದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 700 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು, ಆ ಅರ್ಜಿಗಳನ್ನು ಖುದ್ದು ಸಹಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದೆ. ಅಧಿಕಾರಿಗಳು ಕಾಲಮಿತಿಯಲ್ಲಿ ಈ ಅರ್ಜಿಗಳನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಿರುವುದಾಗಿ ಅವರು ತಿಳಿಸಿದರು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತಿ ಹೆಚ್ಚು 450 ಅರ್ಜಿಗಳು ಬಂದಿವೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ೧೩, ಆರ್‌ಡಿಪಿಆರ್‌ಗೆ ೪೦ ಅರ್ಜಿ, ಮಹಾನಗರ ಪಾಲಿಕೆಗೆ ೩೩ ಅರ್ಜಿ ಬಂದಿವೆ. ಎಸಿ, ತಹಶೀಲ್ದಾರ್‌ಗಳು ಆಯಾ ಹಂತದಲ್ಲಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬುದು ಕಾಣಿಸುತ್ತದೆ. ತಹಸೀಲ್ದಾರ್‌ಗಳಿಗೆ ಸಂಬಂಧಿಸಿದ್ದು ಹೆಚ್ಚಿನ ದೂರುಗಳು ಬಂದಿವೆ. ಕೇವಲ ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ ಮಾಡಲು ಒಂದು ವರ್ಷದಿಂದ ತಿರುಗಾಡುತ್ತಿದ್ದಾರೆ. ಕೋರ್ಟ್ ಆದೇಶ ಬಂದಾಗ ಅನುಷ್ಠಾನಗೊಳಿಸಬೇಕಾದದು ಕಾನೂನಿನಲ್ಲಿ ಕೊಟ್ಟಿರುವ ಅಧಿಕಾರ. ಇದನ್ನು ಮಾಡದೆ ಜನರನ್ನು ಅಲೆದಾಡಿಸುವಂತೆ ಮಾಡುವುದು ಯಾವ ನ್ಯಾಯ? ಇದೇ ರೀತಿಯ ಮುಂದುವರೆದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕಾಗುತ್ತದೆ ಎಂದು ಸೂಚಿಸಿರುವುದಾಗಿ ಅವರು ತಿಳಿಸಿದರು. ಸುಮಾರು 3 ಗಂಟೆಗಳ ಕಾಲ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸಮಸ್ಯೆಗಳನ್ನು ಹೊತ್ತ ಸಾರ್ವಜನಿಕರು, ರೈತರು ಅರ್ಜಿಗಳನ್ನು ಹಿಡಿದು ಸಾಲುಸಾಲಾಗಿ ಸಚಿವರ ಮುಂದೆ ಆಗಮಿಸಿ ಅಹವಾಲು ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ. ಸುರೇಶ್ ಗೌಡ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಖೇತ್ ರಾಜ್ ಮೌರ್ಯ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಪದ ಪೂರ್ವಜನರು ನೀಡಿರುವ ದೊಡ್ಡ ಕೊಡುಗೆ
ಸಾರಿಗೆ ವಿಭಾಗೀಯ ಕಚೇರಿ ಗ್ರಾಮೀಣರಿಗೆ ವರದಾನ