ಕನ್ನಡಪ್ರಭ ವಾರ್ತೆ ಮೈಸೂರು
ಈ ವೇಳೆ ಮಾತನಾಡಿದ ಸಚಿವರು, ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್- ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ವಿಧಾನಪರಿಷತ್ತು ಸದಸ್ಯ ಡಾ.ಡಿ. ತಿಮ್ಮಯ್ಯ, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್. ಗಿರಿಧರ್, ಬಿ.ಕೆ. ಮನು, ಸಿ. ಕೃಷ್ಣ, ಪಿಡಿಒಗಳಾದ ಕೆ. ರುಕ್ಮಾಂಗದ, ಪ್ರಕಾಶ್ ಮೊದಲಾದವರು ಇದ್ದರು.