- ಶೃಂಗೇರಿ, ಬಾಳೆಹೊನ್ನೂರು ಸುತ್ತಮತ್ತ ಕಾಡಾನೆ ಹಾವಳಿ, ಆನೆ ಸಾಪ್ಟ್ ಕ್ಯಾಂಪ್ ಆರಂಭಿಸಲು ಜನಪ್ರತಿನಿಧಿಗಳ ಸಲಹೆ, ಜಿಪಂನಲ್ಲಿ ನಡೆದ ಕೆಡಿಪಿ ಸಭೆ
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡು ವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಕೊಪ್ಪ ಡಿಎಫ್‌ಒಶಿವಶಂಕರ್ಗೆ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆನೆ ಹಾವಳಿ ಬಗ್ಗೆ ವಿಷಯ ಪ್ರಸ್ತಾಪಿಸಿದ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಶೃಂಗೇರಿ, ಬಾಳೆ ಹೊನ್ನೂರು ಭಾಗದಲ್ಲಿ ಐದು ಆನೆಗಳು ನಿರಂತರವಾಗಿ ಬೆಳೆ ನಾಶ ಮಾಡುತ್ತಿದ್ದವು. ಜೊತೆಗೆ ಈಗಾಗಲೇ ಕಾಡಾನೆ ದಾಳಿಗೆ ನಾಲ್ವರು ಮೃತಪಟ್ಟಿದ್ದಾರೆ. ಹೀಗಾಗಿ 2 ಅನೆಗಳನ್ನು ಸೆರೆ ಹಿಡಿಯಲಾಗಿದೆ. ಇನ್ನು 3 ಆನೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಹೀಗಾಗಿ ಉಳಿದಿರುವ ಆನೆಗಳನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದರು.ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕಾಡಾನೆ ದಾಳಿಗೆ ಸಂಬಂಧಪಟ್ಟಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರಾಣ ಹಾನಿ ಪ್ರಕರಣ ಹೆಚ್ಚಾಗಲಿವೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಭದ್ರಾ ಹುಲಿ ಯೋಜನೆ ನಿರ್ದೇಶಕ ಪುಲ್ಕೆತ್ ಮೀಣಾ , ಭದ್ರಾ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿ ಯಲ್ಲಿ ಆನೆಗಳ ಸಾಫ್ಟ್ ರಿಲೀಸ್ ಕೇಂದ್ರ ಆರಂಭಕ್ಕೆ ಭೂಮಿ ನೀಡಲು ಕೇಂದ್ರ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್ ಈ ಕುರಿತು ಕೇಂದ್ರ ಅರಣ್ಯ ಸಚಿವರೊಂದಿಗೆ ಮಾತನಾಡುವ ಭರವಸೆ ನೀಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ನಮೂನೆ 57ರ ಅಡಿ ಕಾಫಿ ಭೂಮಿ, ಕುಮ್ಕಿ, ಸೊಪ್ಪಿನ ಬೆಟ್ಟಗಳನ್ನು ಮಂಜೂರು ಮಾಡಲು ಬರುವುದಿಲ್ಲ. ಯಾವ ಕಾರಣಕ್ಕೆ ರೈತರ ಅರ್ಜಿ ವಜಾಗೊಳಿಸಲಾಗುತ್ತದೆ ಎಂಬ ಮಾಹಿತಿ ಪಡೆಯುತ್ತೇನೆ. ಅರಣ್ಯ ಹಾಗೂ ಕಂದಾಯ ಇಲಾಖೆಗಳು ಜಂಟಿ ಸರ್ವೆ ನಡೆಸಿ ದಾಗ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ತಿಳಿಸಿದರು.
--- ಬಾಕ್ಸ್ --ನೀರಿನ ಮೂಲ ಗುರುತಿಸದೆ ಕಾಮಗಾರಿಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳಡಿ ನೀರಿನ ಮೂಲವನ್ನು ಮೊದಲು ಹುಡುಕಿ ಬಳಿಕ ಕಾಮಗಾರಿ ನಡೆಸಬೇಕು. ಆದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಿನ ಮೂಲ ಗುರುತಿಸದೆ ಕಾಮಗಾರಿ ನಡೆಸಲಾಗಿದೆ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಸಿ.ಟಿ.ರವಿ ಹಾಗೂ ಎಚ್.ಡಿ.ತಮ್ಮಯ್ಯ ಸಭೆಯನ್ನು ಆಗ್ರಹಿಸಿದರು.
- ಅತಿವೃಷ್ಟಿಯಿಂದ ಬಾರಿ ಹಾನಿ-ಜಿಲ್ಲೆಯಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಗೆ ಜೀವ ಹಾನಿ ಸೇರಿದಂತೆ ಸಾಕಷ್ಟು ಹಾನಿ ಸಂಭವಿಸಿದೆ. ಆರು ಜಾನುವಾರುಗಳು ಮೃತಪಟ್ಟಿವೆ ಎಂದು ಡಿಸಿ ಮೀನಾ ನಾಗರಾಜ್ ಸಭೆಗೆ ಮಾಹಿತಿ ನೀಡಿದರು.
12 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ಶುಕ್ರವಾರ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಶಾಸಕರಾದ ನಯನಾ ಮೋಟಮ್ಮ, ಎಚ್.ಡಿ. ತಮ್ಮಯ್ಯ, ಟಿ.ಡಿ. ರಾಜೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಡಿಸಿ ಮೀನಾ ನಾಗರಾಜ್ ಇದ್ದರು.