ಯುಎಇ ತುಂಬೆ ಮೆಡಿಸಿಟಿಗೆ ಕರ್ನಾಟಕ ಸಚಿವ ಕೆ.ಜೆ. ಜಾರ್ಜ್ ಭೇಟಿ

KannadaprabhaNewsNetwork |  
Published : Sep 17, 2026, 02:45 AM IST
ಯುಎಇ ತುಂಬೆ ಮೆಡಿಸಿಟಿಗೆ ಭೇಟಿ ನೀಡಿದ ಕರ್ನಾಟಕ ಸಚಿವ ಕೆ.ಜೆ.ಜಾರ್ಜ್‌ ಅವರನ್ನು ಗೌರವಿಸಿದ ತುಂಬೆ ಗ್ರೂಪ್‌ ಸಂಸ್ಥಾಪಕ ಡಾ.ತುಂಬೆ ಮೊಯ್ದಿನ್‌  | Kannada Prabha

ಸಾರಾಂಶ

ಕರ್ನಾಟಕದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಮಂಗಳವಾರ ಯುಎಇಯ ಅಜ್ಮಾನ್‌ನಲ್ಲಿರುವ ತುಂಬೆ ಮೆಡಿಸಿಟಿಗೆ ಭೇಟಿ ನೀಡಿ, ಅಲ್ಲಿನ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಸಂಶೋಧನಾ ಸೌಲಭ್ಯಗಳನ್ನು ವೀಕ್ಷಿಸಿದರು.

ಮಂಗಳೂರು: ಕರ್ನಾಟಕದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಮಂಗಳವಾರ ಯುಎಇಯ ಅಜ್ಮಾನ್‌ನಲ್ಲಿರುವ ತುಂಬೆ ಮೆಡಿಸಿಟಿಗೆ ಭೇಟಿ ನೀಡಿ, ಅಲ್ಲಿನ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಸಂಶೋಧನಾ ಸೌಲಭ್ಯಗಳನ್ನು ವೀಕ್ಷಿಸಿದರು.

ತುಂಬೆ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಹಾಗೂ ಸಂಸ್ಥೆಯ ಪ್ರಮುಖರು ಸಚಿವರನ್ನು ಸ್ವಾಗತಿಸಿದರು. ಬಳಿಕ ಸಚಿವರು ತುಂಬೆ ಮೆಡಿಸಿಟಿ ಆವರಣದಲ್ಲಿರುವ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ, ತುಂಬೆ ಯೂನಿವರ್ಸಿಟಿ ಹಾಸ್ಪಿಟಲ್ ಹಾಗೂ ತುಂಬೆ ರಿಹ್ಯಾಬಿಲಿಟೇಶನ್ ಹಾಸ್ಪಿಟಲ್‌ಗೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದರು.

ವೈದ್ಯಕೀಯ ಶಿಕ್ಷಣ ಮತ್ತು ಚಿಕಿತ್ಸಾ ಕ್ಷೇತ್ರದಲ್ಲಿ ತುಂಬೆ ಗ್ರೂಪ್ ಎರಡು ದಶಕಗಳಿಗೂ ಹೆಚ್ಚು ಅವಧಿಯಲ್ಲಿ ನಿರ್ಮಿಸಿರುವ ವ್ಯವಸ್ಥೆಯನ್ನು ಸಚಿವರು ಮೆಚ್ಚಿಕೊಂಡರು. ವಿಶ್ವದ 111ಕ್ಕೂ ಅಧಿಕ ರಾಷ್ಟ್ರಗಳ ವಿದ್ಯಾರ್ಥಿಗಳು ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇಲ್ಲಿಂದ ತರಬೇತಿ ಪಡೆದ ವೈದ್ಯಕೀಯ ವೃತ್ತಿಪರರು ವಿಶ್ವದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ಹಾಗೂ ಭಾರತದ ವಿವಿಧ ಭಾಗಗಳ ವಿದ್ಯಾರ್ಥಿಗಳೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದು ವಿಶೇಷವಾಗಿದೆ.

‘ದೂರದೃಷ್ಟಿ ಹಾಗೂ ನಿರಂತರ ಪ್ರಯತ್ನದಿಂದ ವರ್ಷಗಳ ಅವಧಿಯಲ್ಲಿ ಏನನ್ನು ಸಾಧಿಸಬಹುದು ಎಂಬುದಕ್ಕೆ ತುಂಬೆ ಮೆಡಿಸಿಟಿ ಉತ್ತಮ ಉದಾಹರಣೆ. ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಇಂದು ವಿಶ್ವದ ಅತ್ಯುತ್ತಮ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲೊಂದಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಕರ್ನಾಟಕದ ಅನೇಕ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿರುವುದು ಸಂತಸದ ವಿಚಾರ. ಆರೋಗ್ಯ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಈ ಸಂಸ್ಥೆಯ ನಡುವೆ ಮತ್ತಷ್ಟು ಸಹಭಾಗಿತ್ವಕ್ಕೆ ಅವಕಾಶಗಳನ್ನು ಅನ್ವೇಷಿಸಲು ಎದುರು ನೋಡುತ್ತಿದ್ದೇನೆ’ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಲುವೆಗೆ ನೀರು ಹರಿಸಿ, ಸಮರ್ಪಕ ವಿದ್ಯುತ್ ಪೂರೈಸಲು ಆಗ್ರಹ
ಅಗ್ನಿ ದುರಂತ: ಗಾಯಗೊಂಡಿದ್ದ ಮತ್ತಿಬ್ಬರ ಸಾವು