ಕನ್ನಡಪ್ರಭ ವಾರ್ತೆ ಉಡುಪಿ
ಈ ಸಂದರ್ಭ ಶಾಸಕ ಯಸ್ಪಾಲ್ ಎ. ಸುವರ್ಣ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ರಾಜು ಮೊಗವೀರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಫಲಪುಷ್ಪ ಪ್ರದರ್ಶನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ದೊಡ್ಡಣ್ಣಗುಡ್ಡೆಯ ಪುಷ್ಪ ಹರಾಜು ಕೇಂದ್ರದಲ್ಲಿ ಆಯೋಜಿಸಲಾದ ಫಲಪುಷ್ಪ ಪ್ರದರ್ಶನಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಚಾಲನೆ ನೀಡಿದರು.ಈ ಸಂದರ್ಭ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.