ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಸಚಿವ ಎಚ್.ಕೆ. ಪಾಟೀಲ

KannadaprabhaNewsNetwork | Published : Apr 16, 2025 12:32 AM

ಸಾರಾಂಶ

ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ ಪಂಚ ಗ್ಯಾರಂಟಿ ನುಡಿದಂತೆ ನಡಿದಿದ್ದೇವೆ ಎಂಬ ಗದಗ ಜಿಲ್ಲೆಯ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಬಿಡುಗಡೆಗೊಳಿಸಿದರು.

ಗದಗ: ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ ಪಂಚ ಗ್ಯಾರಂಟಿ ನುಡಿದಂತೆ ನಡಿದಿದ್ದೇವೆ ಎಂಬ ಗದಗ ಜಿಲ್ಲೆಯ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಬಿಡುಗಡೆಗೊಳಿಸಿದರು.

ನಗರದ ಮುಳಗುಂದ ನಾಕಾ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಎದುರಿನ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಹಾಗೂ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ ಅವರ ನೂತನ ಕಚೇರಿಯನ್ನು ಉದ್ಘಾಟಿಸಿ ನಂತರ ಬಿಡುಗಡೆಗೊಳಿಸಿದರು.ಈ ವೇಳೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಪಂ ಸಿಇಒ ಭರತ್.ಎಸ್., ಉಪವಿಭಾಗಾಧಿಕಾರಿ ಗಂಗಪ್ಪ.ಎಂ, ನೀಲಮ್ಮ ಬೋಳನವರ, ಹೇಮಂತಗೌಡ ಪಾಟೀಲ, ಶರಣಪ್ಪ ಬೆಟಗೇರಿ, ಪಿ.ಬಿ. ಅಳಗವಾಡಿ, ದೀಪಕ ಲಮಾಣಿ, ಸದಸ್ಯರಾದ, ರೂಪಾ ಅಂಗಡಿ, ಶಿವನಗೌಡ ಪಾಟೀಲ. ಶರೀಫ್ ಬಿಳಿಯಲಿ, ಬಸವರಾಜ ಬೆಳದಡಿ, ವಿವೇಕ ಯಾವಗಲ್, ದೇವಪ್ಪ ಮೋರನಾಳ, ಪುಲಕೇಶಗೌಡ ಪಾಟೀಲ, ವಿರುಪಾಕ್ಷಪ್ಪ ಯಾರಸಿ, ಈಶಣ್ಣ ಹುಣಸಿಕಟ್ಟಿ, ರಾಜೀವ ಗೊಡಚಪ್ಪ ಕುಂಬ, ಗೀತಾ ಸುರೇಶ ಬೀರಣ್ಣವರ, ವೀರಯ್ಯ ಮಠಪತಿ, ಫಕ್ರುಸಾಬ ಚಿಕ್ಕಮಣ್ಣೂರ, ಆರ್.ಆರ್. ಗಡ್ಡದ್ದೇವರಮಠ, ಕೃಷ್ಣಗೌಡ ಪಾಟೀಲ, ಮೀನಾಕ್ಷಿ ಬೆನಕಣ್ಣವರ, ದೇವರಡ್ಡಿ ತಿರ್ಲಾಪುರ, ಶಂಭು ಕಾಳೆ, ರಮೇಶ ಹೊನ್ನಿನಾಯ್ಕರ್, ಭಾಷಾಸಾಬ ಮಲ್ಲಸಮುದ್ರ, ದಯಾನಂದ ಪವಾರ, ನಿಂಗಪ್ಪ ದೇಸಾಯಿ, ಸಂಗಮೇಶ ಕೆರಕಲಮಟ್ಟಿ, ಸಂಗಮೇಶ ಹಾದಿಮನಿ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಸಾವಿತ್ರಿ ಹೂಗಾರ ಸೇರಿದಂತೆ ಇತರರು ಇದ್ದರು.

Share this article