ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 10, 11ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 11ರಂದು ಬೆಳಗ್ಗೆ 9- ಬೋಳೂರು ಅಮೃತಾನಂದಮಯಿ ಮಠದಲ್ಲಿ ಅಮೃತೋತ್ಸವ ಕಾರ್ಯಕ್ರಮ, 10:30- ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟನೆ, 11- ಬೆಳ್ತಂಗಡಿ ಮಾಲಾಡಿ ಗ್ರಾಮದ ಸಬರಬೈಲು ಎಂಬಲ್ಲಿ ನೂತನ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ, 11:30- ಬೆಳ್ತಂಗಡಿ ಲಾಯಿಲ ಕಾಶಿಬೆಟ್ಟು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, 12- ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ, ಬೆಳ್ತಂಗಡಿ ಟೌನ್ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡ ಶಿಲಾನ್ಯಾಸ, 94 ಸಿ ಹಕ್ಕುಪತ್ರ ವಿತರಣೆ, ಮಧ್ಯಾಹ್ನ 1- ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ, ಸಂಜೆ 4 ಗಂಟೆಗೆ ಸಚಿವರು ಬೆಳ್ತಂಗಡಿಯಿಂದ ನಿರ್ಗಮಿಸಿ, ಮಂಗಳೂರು ವಿಮಾನ ನಿಲ್ದಾಣದಿಂದ 6:15ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.