ಕುಡಿವ ನೀರಿನ ಸಮಸ್ಯೆ ಅರಿತು ಸೂಕ್ತ ವ್ಯವಸ್ಥೆಗೆ ಸಚಿವರ ಸೂಚನೆ

KannadaprabhaNewsNetwork |  
Published : Apr 30, 2026, 01:15 AM IST
ಚದ | Kannada Prabha

ಸಾರಾಂಶ

ಚಿಕ್ಕಮಗಳೂರುಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಗ್ರಾಮಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಕೊಳವೆ ಬಾವಿ ಮೂಲಕ ಅಗತ್ಯ ನೀರಿನ ಪೂರೈಕೆ ಮಾಡಬೇಕು. ಮಳೆ ತಡವಾದರೆ, ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಗ್ರಾಮಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಗುರುತಿಸಿ ಸೂಕ್ತ ವ್ಯವಸ್ಥೆ ಮಾಡಿ ಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ -ಮುಂಗಾರು ಪೂರ್ವ ಸಿದ್ಧತೆ ಕುರಿತು ಆನ್‌ ಲೈ ನ್‌ ನಲ್ಲಿ ಸಚಿವ ಜಾರ್ಜ್‌ ಸಭೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಗ್ರಾಮಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಕೊಳವೆ ಬಾವಿ ಮೂಲಕ ಅಗತ್ಯ ನೀರಿನ ಪೂರೈಕೆ ಮಾಡಬೇಕು. ಮಳೆ ತಡವಾದರೆ, ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಗ್ರಾಮಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಗುರುತಿಸಿ ಸೂಕ್ತ ವ್ಯವಸ್ಥೆ ಮಾಡಿ ಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಬುಧವಾರ ಕುಡಿಯುವ ನೀರಿನ ಸಮಸ್ಯೆ ಹಾಗೂ ಮುಂಗಾರು ಪೂರ್ವ ಸಿದ್ಧತೆ ಕುರಿತು ಆನ್‌ಲೈನ್‌ ಮೂಲಕ ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಜಿಲ್ಲೆಯಲ್ಲಿ ಸದ್ಯ 38 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಪೈಕಿ 25 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಹಾಗೂ 13 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಬಾಡಿಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಗ್ರಾಮ, ಹಳ್ಳಿಗಳ ಪಟ್ಟಿ ಮಾಡಿ ಕೊಂಡು ಸೂಕ್ತ ಕ್ರಮವಹಿಸಬೇಕು. ಮುಂಗಾರು ತಡವಾದರೆ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗದಂತೆ ಕೈಗೊಳ್ಳ ಬಹುದಾದ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ಸಿದ್ದಪಡಿಸಿಕೊಳ್ಳುವಂತೆ ನಿರ್ದೇಶಿಸಿದರು.

ಇನ್ನೂ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಇಲ್ಲ. ಇನ್ನೂ 41 ದಿನಕ್ಕೆ ಬೇಕಾಗುವಷ್ಟು ಮೇವಿನ ಸಂಗ್ರಹಿವಿದ್ದು, ಮೇವಿಗೆ ಯಾವುದೇ ತೊಂದರೆ ಇಲ್ಲ. ಇನ್ನೂ ರಸಗೊಬ್ಬರ ದಾಸ್ತಾನು ಇದ್ದು, ಅಗತ್ಯಕ್ಕೆ ತಕ್ಕಂತೆ ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಬಯಲು ಸೀಮೆ ಭಾಗದಲ್ಲಿ ಕೃಷಿ ಪಂಪ್‌ ಸೆಟ್‌ ನಂಬಿಕೊಂಡು ರೈತರು ಕೃಷಿ ನಡೆಸುತ್ತಿದ್ದು, ವಿದ್ಯುತ್‌ ಪೂರೈಕೆಯಲ್ಲಿ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎಚ್‌.ಡಿ.ತಮ್ಮಯ್ಯ, ನಯನಾ ಮೋಟಮ್ಮ, ಟಿ.ಡಿ. ರಾಜೇಗೌಡ, ಶ್ರೀನಿವಾಸ್‌, ಕೆಪೆಕ್‌ ಅಧ್ಯಕ್ಷ ಬಿ.ಎಚ್‌. ಹರೀಶ್‌ ಜಿಲ್ಲಾಧಿಕಾರಿ ಎನ್‌,ಎಂ.ನಾಗರಾಜ್‌, ಜಿಪಂ ಸಿಇಒ ಕೀರ್ತನಾ, ಕೃಷಿ ಇಲಾಖೆಯ ಡಿಡಿ ತಿರುಮಲೇಶ್‌ ಸೇರಿದಂತೆ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು. ಫೋಟೋ

ಕುಡಿಯುವ ನೀರಿನ ಸಮಸ್ಯೆ ಹಾಗೂ ಮುಂಗಾರು ಸಿದ್ಧತೆ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಶಾಸಕರೊಂದಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಬುಧವಾರ ಆನ್‌ಲೈನ್‌ ಸಭೆ ನಡೆಸಿದರು.

ಜತೆಗೆ, ಜಾರ್ಜ್‌ ಒಂದು ಸಣ್ಣ ಫೋಟೋ ಬಳಸಿ------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನರಿಗೆ ನೀರು, ಜಾನುವಾರಿಗೆ ಮೇವಿನ ಕೊರತೆಯಾದಂತೆ ಕ್ರಮವಹಿಸಿ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ಅಭಿವೃದ್ಧಿ ಆಗಿಲ್ಲವೆಂದು ದಿನೇಶ ಶೆಟ್ಟಿ ಕೆಪಿಸಿಸಿಗೆ ಮನದಟ್ಟು