ಆರ್‌.ಅಶೋಕ್ ಬೇಷರತ್ ಕ್ಷಮೆ ಕೇಳುವಂತೆ ಸಚಿವ ಈಶ್ವರ್‌ ಖಂಡ್ರೆ ಒತ್ತಾಯ

KannadaprabhaNewsNetwork |  
Published : Oct 30, 2026, 01:45 AM IST
ಚಿತ್ರ 29ಬಿಡಿಆರ್59 | Kannada Prabha

ಸಾರಾಂಶ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರೂ, ರಾಜ್ಯಸಭೆಯ ಪ್ರತಿಪಕ್ಷದ ನಾಯಕರು ಹಾಗೂ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ನಡೆಯುವ ರೀತಿ ಕುರಿತಂತೆ ವೈಯಕ್ತಿಕ ನಿಂದನೆ ಮಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರೂ, ರಾಜ್ಯಸಭೆಯ ಪ್ರತಿಪಕ್ಷದ ನಾಯಕರು ಹಾಗೂ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ನಡೆಯುವ ರೀತಿ ಕುರಿತಂತೆ ವೈಯಕ್ತಿಕ ನಿಂದನೆ ಮಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ಪಂಚೆಯ ಪ್ರಸ್ತಾಪವನ್ನೂ ಮಾಡಿ, ಅವಹೇಳನ ಮಾಡಿರುವ ಆರ್. ಅಶೋಕ್ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಇದು ಬಿಜೆಪಿಯ ಕೆಟ್ಟ ಸಂಸ್ಕೃತಿಯನ್ನು ತೋರಿಸುತ್ತದೆ. ಇದು ಖಂಡನೀಯ ಎಂದು ಖಂಡ್ರೆ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆದುಕೊಂಡು ಬಂದು ಕುರ್ಚಿಯಲ್ಲಿ ಕೂರಿಸುವ ಸ್ಥಿತಿ ಬಂದಿದೆ ಎಂದೆಲ್ಲಾ ಆರ್. ಅಶೋಕ್ ಮಾತನಾಡಿದ್ದಾರೆ. ಯಾವುದೇ ಹಿರಿಯ ವ್ಯಕ್ತಿಗಳ ವೈಯಕ್ತಿಕ ನಿಂದನೆ ಮಾಡುವುದು ಕೀಳು ರಾಜಕೀಯದ ಪರಮಾವಧಿ ಎಂದು ಕಿಡಿ ಕಾರಿದ್ದಾರೆ.

ಮಾಜಿ ಗೃಹ ಸಚಿವ, ಬಿಜೆಪಿಯ ಆರಗ ಜ್ಞಾನೇಂದ್ರ ಕೂಡ ಈ ಹಿಂದೆ ಮಲ್ಲಿಕಾರ್ಜುನ ಖರ್ಗೆಯವರ ವೈಯಕ್ತಿಕ ನಿಂದನೆ ಮಾಡಿದ್ದರು. ರಾಜ್ಯದ ವಿವಿಧ ಕಡೆ ಪ್ರತಿಭಟನೆ ನಡೆದು, ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾದ ಬಳಿಕ ಕ್ಷಮೆ ಕೇಳಿದರು. ಇದು ಬಿಜೆಪಿಯ ಚಾಳಿ. ಹಿರಿಯರ ಬಗ್ಗೆ ಅವಹೇಳನೆ ಮಾಡುವುದೇ ಅವರ ಸಂಸ್ಕೃತಿ. ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ. ಕೂಡಲೇ ಆರ್. ಅಶೋಕ್ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು