ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

KannadaprabhaNewsNetwork |  
Published : Jan 30, 2025, 12:33 AM ISTUpdated : Jan 30, 2025, 01:35 PM IST
3 | Kannada Prabha

ಸಾರಾಂಶ

ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.

 ಮೈಸೂರು : ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.

ಮೈಸೂರು ಅರಣ್ಯ ಭವನದಲ್ಲಿ ಬುಧವಾರ ಅರಣ್ಯ ಮತ್ತು ಪರಿಸರ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು ಬತ್ತದಂತೆ ಸೌರ ಪಂಪ್ ಸೆಟ್ ಮೂಲಕ ಕೊಳವೆ ಬಾವಿಗಳಿಂದ ನೀರು ಹರಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.

ಬೇಸಿಗೆಯಲ್ಲಿ ಕಾಡ್ಗಿಚ್ಚು ಅರಣ್ಯ ನಾಶಕ್ಕೆ ಕಾರಣವಾಗುತ್ತದೆ. ಹೀಗಾಗಿ ಬರುವ ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಕಾಡ್ಗಿಚ್ಚು ಕಾಣಿಸಿಕೊಂಡರೆ ಕೂಡಲೇ ನಂದಿಸಲು ಅಗ್ನಿಶಾಮಕ ಉಪಕರಣಗಳ ಸುಸ್ಥಿತಿಯನ್ನು ಖಾತ್ರಿಪಡಿಸಿಕೊಂಡು, ಸಿಬ್ಬಂದಿಯನ್ನು ಸನ್ನದ್ಧವಾಗಿರುವಂತೆ ನಿರ್ದೇಶಿಸಲು ಸೂಚಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸಲು ಸೂಚನೆ

ಮೈಸೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲಾಗಿದ್ದು, ನಗರದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಲೋಟ, ಬ್ಯಾನರ್, ಬಂಟಿಗ್ಸ್ ಸೇರಿದಂತೆ ಯಾವುದೇ ಏಕ ಬಳಕೆ ವಸ್ತು ಮಾರಾಟ, ಸಾಗಾಟ, ದಾಸ್ತಾನಿಗೆ ಅವಕಾಶ ಇಲ್ಲದಂತೆ ನಿಯಮಿತವಾಗಿ ತಪಾಸಣೆ ನಡೆಸಿ ದಂಡ ವಿಧಿಸಬೇಕು ಎಂದರು.

ಕಲುಷಿತ ನೀರು ಸೇವಿಸಿ ಯಾರೂ ಅಸ್ವಸ್ಥರಾಗಬಾರದು. ಈ ಹಿನ್ನೆಲೆಯಲ್ಲಿ ನಿಯಮಿತವಾಗಿ ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ ಗಳ ನೀರಿನ ಗುಣಮಟ್ಟ ಪರೀಕ್ಷಿಸುವಂತೆ ತಾಕೀತು ಮಾಡಿದರು.

ಮೈಸೂರು ವೃತ್ತದ ಸಿಸಿಎಫ್ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜು ಹಾಗೂ ಅರಣ್ಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ