ಮೃಗಾಲಯಕ್ಕೆ ಸಚಿವ ಜಾರಕಿಹೊಳಿ ಭೇಟಿ

KannadaprabhaNewsNetwork |  
Published : Nov 19, 2025, 02:45 AM IST
ಕೃಷ್ಣಮೃಗಳ ಸಾವಿನ ಹಿನ್ನೆಲೆಯಲ್ಲಿ ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ರಾಣಿ ಚನ್ನಮ್ಮ ಮೃಗಾಲಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಮೃಗಾಲಯದ ಪ್ರಾಣಿಗಳ ಪಾಲನೆ-ಪೋಷಣೆ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ, ಮುಂಜಾಗ್ರತಾ ಕ್ರಮ ಕೈಗೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಣಿ ಚನ್ನಮ್ಮ ಮೃಗಾಲಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಮೃಗಾಲಯದ ಪ್ರಾಣಿಗಳ ಪಾಲನೆ-ಪೋಷಣೆ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ, ಮುಂಜಾಗ್ರತಾ ಕ್ರಮ ಕೈಗೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷ್ಣ ಮೃಗಗಳು ಕಾಯಿಲೆಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮೃಗಾಯಲಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಚರ್ಚಿಸಿದರು. ಕೃಷ್ಣ ಮೃಗಗಳಿಗೆ ಬಂದ ಈ ಕಾಯಿಲೆ ಬೇರೆ ಬೇರೆ ಪ್ರಾಣಿಗಳಿಗೂ ಸೋಂಕು ತಗಲುವ ಸಾಧ್ಯತೆ ಇದ್ದರೆ ಮುಂಜಾಗ್ರತವಾಗಿ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಕಾಯಿಲೆ ಬೇರೆ ಪ್ರಾಣಿಗಳ ಮೇಲೆ ಪರಿಣಾಮ ಬೀರುವ ಯಾವುದೇ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಸ್ಪಷ್ಟಪಡಿಸಿದರು.

ಬೆಂಗಳೂರಿನಿಂದ ನುರಿತ ತಜ್ಞವೈದ್ಯರ ತಂಡ ಮೃಗಾಲಯದಲ್ಲಿ ಕೃಷ್ಣಮೃಗಗಳ ಚಿಕಿತ್ಸೆ ನೀಡಿದೆ. ಈ ಕಾಯಿಲೆ ಬಗ್ಗೆ ಲ್ಯಾಬ್‌ನಿಂದ ವರದಿ ಕೂಡ ಪಡೆಯಲಾಗಿದೆ. ಸಧ್ಯ ಇರುವ ಹುಲಿ, ಸಿಂಹಗಳು ಸೇರಿದಂತೆ ಇನ್ನುಳಿದ ಪ್ರಾಣಿಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಿ ಪ್ರಾಣಿಗಳ ಆರೋಗ್ಯ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಈ ಕಾಯಿಲೆ ಹೆಚ್ಚಾಗದಂತೆ ನಿಯಂತ್ರಿಸಲು ವೈದ್ಯ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಕಾಯಿಲೆ ಹತೋಟಿಗೆ ತರಲು ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗಿದೆ. ಕಾಯಿಲೆ ಹತೋಟಿಗೆ ಕೂಡ ಬಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ, ಬೆಳಗಾವಿ ಮುಖ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ ಚವ್ಹಾಣ, ಉಪ ಅರಣ್ಯಸಂರಕ್ಷಣಾಧಿಕಾರಿ ಕ್ರಾಂತಿ.ಎನ್‌.ಇ, ಎಸಿಎಪ್‌ ನಾಗರಾಜ ಬಾಳೇಹೂಸೂರ, ವೈದ್ಯರಾದ ಪ್ರಯಾಗ್‌ ಹಾಗೂ ಮೃಗಾಲಯದ ಸಿಬ್ಬಂದಿ ಇತರರು ಇದ್ದರು.-----------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ