ಮತದಾನ ಕೇಂದ್ರಗಳಿಗೆ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ

KannadaprabhaNewsNetwork |  
Published : Oct 24, 2026, 01:45 AM IST
ಕ್ಯಾಪ್ಷನ23ಕೆಡಿವಿಜಿ38, 39 ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು. | Kannada Prabha

ಸಾರಾಂಶ

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾನ ಶುಕ್ರವಾರ ನಡೆಯಿತು. ಈ ಹಿನ್ನೆಲೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆನಗೋಡು, ಅಣಜಿ ಹಾಗೂ ಮಾಯಕೊಂಡ ಗ್ರಾಮಗಳಲ್ಲಿನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆ ಸಮಾಲೋಚಿಸಿದ್ದಾರೆ.

- ಆನಗೋಡು, ಅಣಜಿ, ಮಾಯಕೊಂಡ ಗ್ರಾಮಗಳ ಸಮಾಲೋಚನೆ

- - -

ದಾವಣಗೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾನ ಶುಕ್ರವಾರ ನಡೆಯಿತು. ಈ ಹಿನ್ನೆಲೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆನಗೋಡು, ಅಣಜಿ ಹಾಗೂ ಮಾಯಕೊಂಡ ಗ್ರಾಮಗಳಲ್ಲಿನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆ ಸಮಾಲೋಚಿಸಿದರು.

ಈ ಸಂದರ್ಭ ಮತ ಚಲಾಯಿಸಲು ತೆರಳುತ್ತಿದ್ದ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದ ಸಚಿವರು, ಅಭ್ಯರ್ಥಿ ಪರವಾಗಿ ಮತದಾರರನ್ನು ಸಂಪರ್ಕಿಸಿ ಮತಯಾಚನೆ ಮಾಡುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು.

ಮಾಯಕೊಂಡಕ್ಕೆ ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ಸಚಿವರನ್ನು ಭೇಟಿ ಮಾಡಿ ತಮ್ಮ ವಿವಿಧ ಸಮಸ್ಯೆಗಳನ್ನು ವಿವರಿಸಿ, ಪರಿಹಾರ ಕಲ್ಪಿಸುವಂತೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ, ಶೀಘ್ರವೇ ಸೂಕ್ತ ಪರಿಹಾರ ಕಲ್ಪಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

- - -

-23ಕೆಡಿವಿಜಿ38, 39:

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ತು ಚುನಾವಣೆ ಹಿನ್ನೆಲೆ ಸಚಿವ ಕೆ.ಎಸ್. ಬಸವಂತಪ್ಪ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆ ಸಮಾಲೋಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಪೋಷಕರು ಪಣ ತೊಡಬೇಕು: ನಯನಾ ಮೋಟಮ್ಮ
ವೀರವನಿತೆ ಚೆನ್ನಮ್ಮ ಆದರ್ಶ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ