ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವ ಕಾಶಪ್ಪನವರ ಚಾಲನೆ

KannadaprabhaNewsNetwork |  
Published : Nov 03, 2026, 03:15 AM IST
2ಬಿಕೆಟಿ1(1) -ಕೃಷಿ ಚಟುವಟಿಕೆ ಹಾಗೂ ಗ್ರಾಮೀಣ ಕಲೆ-ಸಂಸ್ಕೃತಿಯ ನೈಜ ಅನುಭವ ಒದಗಿಸುವ ಉದ್ದೇಶದಿಂದ ಆಯೋಜಿಸಿರುವ ಗ್ರಾಮಾನುಭವ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳ ಕ್ಷೇತ್ರ ಭೇಟಿಗಾಗಿ ಎರಡು ಬಸ್ಗಳು) | Kannada Prabha

ಸಾರಾಂಶ

ಬಾಗಲಕೋಟೆ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ, ಕೃಷಿ ಚಟುವಟಿಕೆ ಹಾಗೂ ಗ್ರಾಮೀಣ ಕಲೆ-ಸಂಸ್ಕೃತಿಯ ನೈಜ ಅನುಭವ ಒದಗಿಸುವ ಉದ್ದೇಶದಿಂದ ಆಯೋಜಿಸಿರುವ ಗ್ರಾಮಾನುಭವ ಕಾರ್ಯಕ್ರಮ ನಿಮಿತ್ತ ವಿದ್ಯಾರ್ಥಿಗಳ ಕ್ಷೇತ್ರ ಭೇಟಿಗಾಗಿ ಎರಡು ಬಸ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಭಾನುವಾರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ, ಕೃಷಿ ಚಟುವಟಿಕೆ ಹಾಗೂ ಗ್ರಾಮೀಣ ಕಲೆ-ಸಂಸ್ಕೃತಿಯ ನೈಜ ಅನುಭವ ಒದಗಿಸುವ ಉದ್ದೇಶದಿಂದ ಆಯೋಜಿಸಿರುವ ಗ್ರಾಮಾನುಭವ ಕಾರ್ಯಕ್ರಮ ನಿಮಿತ್ತ ವಿದ್ಯಾರ್ಥಿಗಳ ಕ್ಷೇತ್ರ ಭೇಟಿಗಾಗಿ ಎರಡು ಬಸ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಭಾನುವಾರ ಚಾಲನೆ ನೀಡಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಡೆಯಲಿರುವ ಗ್ರಾಮಾನುಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬಾಗಲಕೋಟೆ ನಗರ ಪ್ರದೇಶದ ಆಯ್ದ ಐದು ಶಾಲೆ ಹಾಗೂ ಕಾಲೇಜುಗಳ 863 ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಗೆ ಕ್ಷೇತ್ರ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಕೃಷಿ ಹಾಗೂ ಗ್ರಾಮೀಣ ಬದುಕಿನ ಕುರಿತು ನೇರ ಅನುಭವ ಪಡೆಯಲಿದ್ದಾರೆ ಎಂದರು.

ಗ್ರಾಮೀಣ ಬದುಕಿನ ಪರಿಚಯ:

ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಪ್ರಗತಿಪರ ರೈತರ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಗುತ್ತದೆ. ವಿವಿಧ ಬೆಳೆಗಳು, ಗ್ರಾಮೀಣ ಕಸಬುಗಳು, ಪಶುಸಂಗೋಪನೆ, ಹೈನುಗಾರಿಕೆ, ತೋಟಗಾರಿಕೆ ಬೆಳೆಗಳು ಸೇರಿಗ್ರಾಮೀಣ ಆರ್ಥಿಕ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಗ್ರಾಮೀಣ ಕಲೆ, ಸಂಸ್ಕೃತಿ ಮತ್ತು ಜೀವನ ಪದ್ಧತಿಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ವಿದ್ಯಾರ್ಥಿಗಳು ರೈತರನ್ನು ಭೇಟಿ ಮಾಡಿ ಕೃಷಿ ಚಟುವಟಿಕೆ ವೀಕ್ಷಿಸುವುದರ ಮೂಲಕ ಪಠ್ಯಪುಸ್ತಕದ ಜ್ಞಾನವನ್ನು ನೈಜ ಅನುಭವ ಪಡೆಯಲಿದ್ದಾರೆಂದು ತಿಳಿಸಿದರು.

18 ಮಾರ್ಗಗಳಲ್ಲಿ ಕ್ಷೇತ್ರ ಭೇಟಿ: ಗ್ರಾಮಾನುಭವ ಕಾರ್ಯಕ್ರಮದಡಿ ಒಟ್ಟು 18 ಮಾರ್ಗಗಳಲ್ಲಿ ಕ್ಷೇತ್ರ ಭೇಟಿ ಕೈಗೊಳ್ಳಲಾಗುತ್ತಿದ್ದು, ಪ್ರತಿ ಕ್ಷೇತ್ರ ಭೇಟಿ ಸುಮಾರು 6 ರಿಂದ 8 ಗಂಟೆಗಳ ಅವಧಿಯಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಒಟ್ಟು 38 ರೈತರನ್ನು ಭೇಟಿ ಮಾಡಿ ವಿವಿಧ ಕೃಷಿ ಹಾಗೂ ಗ್ರಾಮೀಣ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ಕಾರ್ಯಕ್ರಮದಲ್ಲಿ 8, 9 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, 3 ಸರ್ಕಾರಿ ಹಾಗೂ 2 ಅನುದಾನರಹಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.

ಐದು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗಿ: ಬಾಗಲಕೋಟೆಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 458 ವಿದ್ಯಾರ್ಥಿಗಳು, ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿ.ಟಿ.ಡಿ.ಎ.ಯ 83 ವಿದ್ಯಾರ್ಥಿಗಳು, ಪಿ.ಎಂ.ಶ್ರೀ ಕಟಕ ಪಬ್ಲಿಕ್ ಸ್ಕೂಲ್ ನಂ.7, ನವನಗರದ 84 ವಿದ್ಯಾರ್ಥಿಗಳು ಹಾಗೂ ಸಮೃದ್ಧಿ ಗುರುಕುಲ ಶ್ರೀ ಎಸ್.ಎಸ್. ಶಿರೂರ ಎಚ್.ಪಿ.ಎಸ್. ಮತ್ತು ಪ್ರೌಢಶಾಲೆ, ವಿದ್ಯಾಗಿರಿಯ ವಿದ್ಯಾರ್ಥಿಗಳು ಸೇರಿ ಒಟ್ಟು 863 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಗ್ರಾಮಾನುಭವ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾರಿಗೆ ಇಲಾಖೆ ಸಹಯೋಗ ನೀಡುತ್ತಿವೆ. ನಗರದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಗೆ ತೆರಳಿ ರೈತರೊಂದಿಗೆ ಬೆರೆತು ಕೃಷಿ ಮತ್ತು ಗ್ರಾಮೀಣ ಬದುಕಿನ ನೈಜ ಅನುಭವ ಪಡೆಯುವ ಮೂಲಕ ಗ್ರಾಮಾನುಭವ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಜೀವನದ ಬಗ್ಗೆ ಗೌರವ, ಅರಿವು ಹಾಗೂ ಕೃಷಿಯ ಮಹತ್ವವನ್ನು ಮೂಡಿಸುವ ಮಹತ್ವದ ಶೈಕ್ಷಣಿಕ ಪ್ರಯತ್ನವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ,ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ, ಶಾಸಕ ಉಮೇಶ ಮೇಟಿ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಪಂಚ ಗ್ಯಾರಂಟಿ ಅಧ್ಯಕ್ಷ ಅನೀಲ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಮಂಜುನಾಥ ಡೊಂಬರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು, ಉಪ ಸಮನ್ವಯಾಧಿಕಾರಿ ಪ್ರಮೋದಿನಿ ಬಳೂಲಮಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ