ಉಡುಪಿ ಜಿಲ್ಲಾಸ್ಪತ್ರೆಗೆ ಸಚಿವ ಖಾದರ್ ದಿಢೀರ್ ಭೇಟಿ

KannadaprabhaNewsNetwork |  
Published : Jul 13, 2026, 01:30 AM IST
12ಖಾದರ್ | Kannada Prabha

ಸಾರಾಂಶ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸಚಿವ ಯು.ಟಿ. ಖಾದರ್ ಭಾನುವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಉಡುಪಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸಚಿವ ಯು.ಟಿ. ಖಾದರ್ ಭಾನುವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಒಳರೋಗಿಗಳನ್ನು ಮಾತನಾಡಿಸಿ, ಆಸ್ಪತ್ರೆಯ ಸೌಲಭ್ಯ ಮತ್ತು ವೈದ್ಯರ ಸೇವೆಗಳ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಚಿಕಿತ್ಸೆ ಮತ್ತು ಶುಶ್ರೂಷಕ ಅಧಿಕಾರಿಗಳ ಚಿಕಿತ್ಸೆ ಬಗ್ಗೆ ಒಳರೋಗಿಯಾಗಿ ದಾಖಲಾತಿಗೊಂಡಿರತಕ್ಕಂತಹ ರೋಗಿಗಳ ಜೊತೆ ಸಂವಾದವನ್ನು ನಡೆಸಿದರು. ಆಸ್ಪತ್ರೆಗೆ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಚ್. ಅಶೋಕ್ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಅವರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಆಸ್ಪತ್ರೆಯಲ್ಲಿಯೇ ಆರೋಗ್ಯ ಸಭೆಯನ್ನು ನಡೆಸಿದ ಸಚಿವರು ಆಸ್ಪತ್ರೆಯ ಒಳರೋಗಿ ಮತ್ತು ಮಹಿಳಾ ರೋಗಿಗಳಿಂದ ಉತ್ತಮ ಪ್ರತಿಕ್ರಿಯೆ ಮತ್ತು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಪತ್ರೆಗೆ ಪ್ರತಿದಿನ 700 - 800 ಹೊರರೋಗಿಗಳು ಭೇಟಿ ನೀಡುವ ಮತ್ತು ಯ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ಒಂದು ತಿಂಗಳಿಗೆ ಸುಮಾರು 150ಕ್ಕೂ ಹೆಚ್ಚು ಹೆರಿಗೆ ಆಗುವುದರ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರು. ಅದೇ ರೀತಿ ತಾಲೂಕು ಆಸ್ಪತ್ರೆಗಳಲ್ಲಿಯೂ ಹೆರಿಗೆಯ ವ್ಯವಸ್ಥೆಯನ್ನು ಇನ್ನು ಉತ್ತಮಪಡಿಸಿ, ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೇವೆ ನೀಡುವಂಚೆ ಸಲಹೆಯನ್ನು ನೀಡಿದರು.ಆಸ್ಪತ್ರೆಯಲ್ಲಿ ಮುಖ್ಯಸ್ಥರು ತಿಂಗಳಿಗೆ ಎರಡು ಬಾರಿಯಾದರೂ ಪತ್ರಿಕಾ ಸಭೆಯನ್ನು ನಡೆಸಿ, ಜಿಲ್ಲಾ ಆಸ್ಪತ್ರೆಯಲ್ಲಿ ಉತ್ತಮ ಆರೊಗ್ಯ ಸೌಲಭ್ಯ ನಡೆಯುತ್ತಿರುವುದರ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿ ಜನರಲ್ಲಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಒಲವು ಮೂಡಿಸಬೇಕು ಎಂದು ಸಲಹೆ ಮಾಡಿದರು.

16ರಂದು ಬೆಂಗಳೂರಲ್ಲಿ ಸಭೆ: ನಂತರ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ದುರಸ್ತಿ, ತೊಂದರೆ, ಆಸ್ಪತ್ರೆ ಎದುರುಗಡೆ ಇರುವಂತಹ ಬೃಹತ್ ಗುಂಡಿಯ ಬಗ್ಗೆ, ಉದ್ಘಾಟನೆಗೆ ಕಾಯುತ್ತಿರುವ ನೂತನ ಆಸ್ಪತ್ರೆಯ ಕಟ್ಟಡಕ್ಕೆ ಬೇಕಾಗಿರತಕ್ಕಂತಹ ಸೌಲಭ್ಯಗಳ ಬಗ್ಗೆ ಚರ್ಚಿಸಲು ಜು. 16ರಂದು ಬೆಂಗಳೂರಿನಲ್ಲಿ ಇಲಾಖೆಯ ಆಯುಕ್ತರು ಮತ್ತು ಅಧಿಕಾರಿಗಳ ಜೊತೆ ಮತ್ತು ವಿಶೇಷ ಸಭೆಯನ್ನು ನಡೆಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ, ಗಫೂರ್, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತ ಅಧ್ಯಕ್ಷ ಅಶೋಕ್ ಕೊಡವೂರು, ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಸ್ಪೂರ್ತಿಯಾಗಬೇಕು: ಹರೀಶ್ ಪೂಂಜ
ಉಡುಪಿ: ಸಾಧಕ ಅರ್ಥಧಾರಿಗಳಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ