ಬೀದರ್‌ನಲ್ಲಿ ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆಗೆ ಸಚಿವ ಖಂಡ್ರೆ ಚಾಲನೆ

KannadaprabhaNewsNetwork |  
Published : Jul 19, 2025, 01:00 AM IST
ಚಿತ್ರ 18ಬಿಡಿಆರ್‌4ಬೀದರ್‌ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಯೋಜನೆಯ ಮಹತ್ವವನ್ನು ವಿವರಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು. | Kannada Prabha

ಸಾರಾಂಶ

ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಾರಿ ತರಲಾಗಿದ್ದು ಜನರು ಆರೋಗ್ಯ ಕಾಪಾಡಿಕೊಳ್ಳಲು ಇದು ಅನುಕೂಲ ಒದಗಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಾರಿ ತರಲಾಗಿದ್ದು ಜನರು ಆರೋಗ್ಯ ಕಾಪಾಡಿಕೊಳ್ಳಲು ಇದು ಅನುಕೂಲ ಒದಗಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಅವರು ಇಲ್ಲಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಯೋಜನೆಗೆ ಚಾಲನೆ ನೀಡಿ ಯೋಜನೆಯ ಮಹತ್ವವನ್ನು ವಿವರಿಸಿ, ಯೋಜನೆಯಡಿಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯ ಕರ್ತರು ಮನೆ ಮನೆಗೆ ಭೇಟಿ ನೀಡುವ ಮೂಲಕ ರಕ್ತದೊತ್ತಡ, ಶುಗರ್, ಅಸ್ವಸ್ಥತೆ, ಪೋಷಣಾ ಕೊರತೆ ಮೊದಲಾದ ವಿವಿಧ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲಿದ್ದಾರೆ. ತಕ್ಷಣವೇ ಔಷಧಿ ವಿತರಣೆ ಮತ್ತು ವೈದ್ಯಕೀಯ ಸಲಹೆ ನೀಡುವ ವ್ಯವಸ್ಥೆ ಕೂಡ ಒದಗಿಸಲಾಗುತ್ತದೆ ಎಂದರು.

ಆಧುನಿಕ ಈ ಯುಗದಲ್ಲಿ ವಿಜ್ಞಾನ ತಂತ್ರಜ್ಞಾನ ಮುಂದುವರೆದಿದೆ. ನಗರೀಕರಣ, ಅಭಿವೃದ್ಧಿ ಹೆಚ್ಚಾದಂತೆ ರೋಗಗಳೂ ಹೆಚ್ಚಾಗುತ್ತಿವೆ. ಆಹಾರ, ನೀರು, ಗಾಳಿಯಲ್ಲಿನ ಮಾಲಿನ್ಯ ಅಲ್ಲದೆ ಜೀವನ ಮತ್ತು ಆಹಾರ ಪದ್ದತಿಯಲ್ಲಿನ ಭಾರಿ ಬದಲಾವಣೆ ನಮ್ಮನ್ನು ಅನಾರೋಗ್ಯಕ್ಕೆ ನೂಕುತ್ತಿದೆ. ದುಷ್ಟಟಗಳು ಯುವ ಜನಾಂಗದಲ್ಲಿ ಹೆಚ್ಚಾಗುತ್ತಿರುವದು ಅತ್ಯಂತ ಆತಂಕದ ವಿಚಾರ ಎಂದರು.

ಆರೋಗ್ಯವಂತ ಸಮಾಜಕ್ಕೆ ಯುವ ಜನಾಂಗದ ಆರೋಗ್ಯ ಉತ್ತಮವಾಗಿರಬೇಕು ಯುವಕರು ಶಾರೀರಿಕವಾಗಿ ಸದೃಢವಾಗಿದ್ದಾರೆಯೇ ಎಂಬ ಬಗ್ಗೆ ಚಿಂತೆ ಸದಾ ಕಾಡುವಂತಾಗಿದೆ ಹೀಗಾಗಿ ಸಾರ್ವಜನಿಕ ರು ಈ ಸೇವೆಯಿಂದ ಸದ್ಬಳಕೆ ಮಾಡಿಕೊಂಡು, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಸಮಸ್ಯೆ ಇರುವಲ್ಲಿ ತಕ್ಷಣ ವೈದ್ಯಕೀಯ ನೆರವನ್ನು ಪಡೆಯಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಶೇ.15ರಷ್ಟು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಅಂದಾಜನ್ನು ಇಲಾಖಾ ಅಧಿಕಾರಿಗಲು ನೀಡಿದ್ದಾರಾದರೆ ಅದು ಶೇ. 30ರಷ್ಟು ಇರಬಹುದೆಂಬ ಅಂದಾಜಿದೆ. ಆಶಾ ಕಾರ್ಯಕರ್ತೆಯರ ಮೂಲಕ ಸರ್ವೆ ಮಾಡಿಸಿ ಮಧುಮೇಹಿಗಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಮುಂದಾಗಿ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ. ಗಿರೀಶ ಬದೋಲೆ ಇದ್ದರು.

PREV

Recommended Stories

ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಪತ್ನಿ ಮೇಲೆ ಹಲ್ಲೆಗೈದು ಅರ್ಧ ತಲೆ ಬೋಳಿಸಿದ ಪತಿ