ಅಪರೂಪದ ಕಡಲಾಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ

KannadaprabhaNewsNetwork |  
Published : Feb 07, 2024, 01:49 AM IST
ಅಪರೂಪದ ಕಡಲಾಮೆ ಮೊಟ್ಟೆಗಳು. | Kannada Prabha

ಸಾರಾಂಶ

ತಣ್ಣೀರುಬಾವಿ ಬೀಚ್‌ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದಿದ್ದರು. ಕೂಡಲೇ ಸಚಿವರು ಸ್ಥಳಕ್ಕೆ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಅತ್ಯಪರೂಪದ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.

ತಣ್ಣೀರುಬಾವಿ ಬೀಚ್‌ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದಿದ್ದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಈ ಮೊಟ್ಟೆಗಳು ಮರಿಯಾದ ಬಳಿಕ ಸುರಕ್ಷಿತವಾಗಿ ಕಡಲಿಗೆ ಬಿಡುವಂತೆ ಸೂಚಿಸಿದರು.ಈ ಅಪರೂಪದ ಆಮೆಗಳ ಮೊಟ್ಟೆ ನಾಯಿ ಮತ್ತು ಪಕ್ಷಿಗಳ ಪಾಲಾಗದಂತೆ ಸುತ್ತಲೂ ಕಟ್ಟೆ ಕಟ್ಟಿ ಸಂರಕ್ಷಿಸಿರುವ ಅರಣ್ಯ ಸಿಬ್ಬಂದಿಯ ಕಾಳಜಿ ಮತ್ತು ತಣ್ಣೀರುಬಾವಿ ಕಡಲ ತೀರವನ್ನು ಅತ್ಯಂತ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಳನ್ ಮತ್ತಿತರರು ಇದ್ದರು.ಕಡಲಾಮೆ ಮೊಟ್ಟೆ ಪತ್ತೆಹಚ್ಚಿದ ಮೀನುಗಾರರಿಗೆ ಬಹುಮಾನ- ತಣ್ಣೀರುಬಾವಿಯ ಕಡಲ ತೀರದಲ್ಲಿ ಅಪರೂಪದ ಕಡಲಾಮೆ ಮೊಟ್ಟೆ ಇಟ್ಟಿರುವುದನ್ನು ಪತ್ತೆ ಮಾಡಿ ಸಂರಕ್ಷಣೆಗೆ ನೆರವಾದ ಸಸಿಹಿತ್ಲು ಗ್ರಾಮದ ಮೀನುಗಾರರಾದ ಆನಂದ ಕೋಟ್ಯಾನ್ ಮತ್ತು ವಾಸು ಕೋಟ್ಯಾನ್ ಅವರಿಗೆ ಸಚಿವರು 5 ಸಾವಿರ ರು.ಗಳ ನಗದಿನೊಂದಿಗೆ ಪ್ರಶಂಸಾ ಪತ್ರ ಪ್ರದಾನ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ