ಕನ್ನಡಪ್ರಭ ವಾರ್ತೆ ಬೆಳಗಾವಿ
ಸವದತ್ತಿಯ ನವಿಲುತೀರ್ಥದ ಸುಪರಿಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ ಮಂಗಳವಾರ ನಡೆದ ಮಲಪ್ರಭಾ ಯೋಜನೆಯ 2024-25ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ತಿಂಗಳು ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಿ, ಹಳ್ಳ, ಕೆನಾಲ್ ಗಳಿಗೆ ನೀರು ಬಿಡುಗಡೆಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಕುಡಿಯುವ ನೀರು ಪೂರೈಕೆ ಜೊತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಜಲಾಶಯಗಳಲ್ಲಿ ನೀರಿನ ಮಟ್ಟ, ಒಳಹರಿವು ಸೇರಿದಂತೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನೀರು ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.ನದಿ ಪಾತ್ರಗಳಲ್ಲಿ ಬರುವ ಗ್ರಾಮ ಹಾಗೂ ಪಟ್ಟಣಗಳಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಈಗಾಗಲೇ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ಮಲಪ್ರಭ ಎಡದಂಡೆಯ ಕೆರೆಗಳಲ್ಲಿ ನೀರು ತುಂಬಿಸಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ವಿವರಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತರಿಗೆ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ. ಈ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕಾಟಾಚಾರದ ಉತ್ತರ ಕೇಳಿ ಬರುತ್ತಿವೆ. ಇದರಿಂದಾಗಿ ಸಾಕಷ್ಟು ರೈತರಿಗೆ ತೊಂದರೆಯಾಗುತ್ತಿದೆ ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರೊಬ್ಬರು ಆಗ್ರಹಿಸಿದರು.
ನೀರು ಬಿಡುಗಡೆಗೆ ಮುನ್ನ ಕಾಲುವೆಗಳ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಇಲ್ಲಿಯವರೆಗೂ ಯಾವೊಂದು ಕಾಲುವೆಗಳ ಸ್ವಚ್ಛತೆ ಪೂರ್ಣಗೊಳಿಸಿಲ್ಲ. ಕೂಡಲೇ ಟೆಂಡರ್ ಕರೆದು ಕಾಲುವೆಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ, ಮಲಪ್ರಭ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಸೇರಿದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಎಡದಂಡೆ ಕಾಲುವೆಗೆ ಸಮರ್ಪಕವಾಗಿ ನೀರು ಬಿಡುಗಡೆ ಮಾಡುತ್ತಿಲ್ಲ. ಎಡದಂಡೆ ಬಲದಂಡೆ ಎರಡೂ ಕಾಲುವೆಗಳಲ್ಲಿ ನಿಯಮಿತವಾಗಿ ನೀರು ಬಿಡಬೇಕು. ಕೇವಲ ಬಲದಂಡೆಗೆ ಮಾತ್ರ ಹೆಚ್ಚಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ. ತಾರತಮ್ಯ ಧೋರಣೆ ಬಿಟ್ಟು ರೈತರ ಜಮೀನುಗಳಿಗ ಅಗತ್ಯಕ್ಕೆ ತಕ್ಕಂತೆ ನೀರು ಬಿಡುಗಡೆಗೆ ಮಾಡುವ ಮೂಲಕ ನೀರು ಪೂರೈಕೆ ಆಗಬೇಕು ಎಂದು ರೈತ ಮುಖಂಡರೊಬ್ಬರು ಒತ್ತಾಯಿಸಿದರು.
- ಲಕ್ಷ್ಮೀ ಹೆಬ್ಬಾಳಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ