ಕನ್ನಡಪ್ರಭ ವಾರ್ತೆ ಬೆಳಗಾವಿ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರತಿಯೊಬ್ಬರ ಸಮಸ್ಯೆಯನ್ನು ಸಮಾಧಾನದಿಂದ ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕೆಲವು ತುರ್ತು ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಪರಿಹಾರ ಕಲ್ಪಿಸಲು ಕ್ರಮ ಕೈಗೊಂಡರು.
ಜನರ ಸಮಸ್ಯೆಗಳನ್ನು ನೇರವಾಗಿ ಕೇಳುವುದು ಮತ್ತು ಅವುಗಳಿಗೆ ತಕ್ಷಣ ಸ್ಪಂದಿಸುವುದು ಸರ್ಕಾರದ ಪ್ರಮುಖ ಹೊಣೆಗಾರಿಕೆ. ಜನತಾ ದರ್ಶನವು ಜನರಿಗೆ ಸರ್ಕಾರದೊಂದಿಗೆ ನೇರ ಸಂಪರ್ಕ ಸಾಧಿಸುವ ವೇದಿಕೆಯಾಗಿದೆ ಎಂದು ಇದೇ ಸಂದರ್ಭದಲ್ಲಿ ಸಚಿವೆ ಹೇಳಿದರು.ಕಾರ್ಯಕ್ರಮದ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ, ಬಾಳು ದೇಸೂರಕರ್ ಸೇರಿದಂತೆ ಹಲವು ಮುಖಂಡರು, ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಜನತಾ ದರ್ಶನದಲ್ಲಿ ಜನಸಾಮಾನ್ಯರ ಉತ್ಸಾಹಭರಿತ ಭಾಗವಹಿಸುವಿಕೆ ಗಮನ ಸೆಳೆದಿದ್ದು, ತಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ದೊರೆಯುತ್ತಿದೆ ಎಂಬ ವಿಶ್ವಾಸವನ್ನು ಜನರು ವ್ಯಕ್ತಪಡಿಸಿದರು.