ಕನ್ನಡಪ್ರಭ ವಾರ್ತೆ ವಿಜಯಪುರ
ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವರಾದ ನಂತರ ವಿಜಯಪುರಕ್ಕೆ ಆಗಮಿಸಿದ ಸಚಿವ ಎಂ.ಬಿ.ಪಾಟೀಲ, ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಬಾಗಲಕೋಟೆ ಶಾಸಕ ಉಮೇಶ ಮೇಟಿ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೃಹತ್ ಕೈಗಾರಿಕೆ ಸಚಿವರಾಗಿ ಜಿಲ್ಲೆಗೆ ಅನೇಕ ಕೈಗಾರಿಕೆ ತರುವ ಮೂಲಕ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.
ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಕೊಟ್ಟ ಸಚಿವ ಸ್ಥಾನ ಉತ್ಸುಕತೆಯಿಂದ ಬಳಕೆ ಮಾಡುವ ಸಚಿವರೆಂದರೆ ಎಂ.ಬಿ.ಪಾಟೀಲರು. ಇವರ ಮಾರ್ಗದರ್ಶನದಲ್ಲಿ ನಾನು ಕೂಡ ಎಲ್ಲರ ಜೊತೆಗೂಡಿ ಸಮಾಜ ಸೇವೆಯಲ್ಲಿ ತೊಡಗುತ್ತೇನೆ ಎಂದರು.ಸಚಿವ ಎಂ.ಬಿ. ಪಾಟೀಲ ಮಾತನಾಡಿ, ನಾನು ಶಾಸಕನಾಗಿ, ಸಚಿವನಾಗಬೇಕಾದರೆ ತಮ್ಮೆಲ್ಲರ ಸೇವೆ ಅಮೂಲ್ಯವಾದದ್ದು. ನಾನು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಬಂದು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರ ಜೊತೆ ಚರ್ಚಿಸಲು ಬಂದಿದ್ದೆ. ಆದರೆ ಅಧ್ಯಕ್ಷರು ಮಂಟಪ ಹಾಕಿ ಅಭಿನಂದನಾ ಸನ್ಮಾನ ಮಾಡಿದರು ಎಂದರು.