ಕನ್ನಡಪ್ರಭ ವಾರ್ತೆ ವಿಜಯಪುರ
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೂರನೇ ಟಿಪ್ಪು ಎಂಬ ಸಚಿವ ಎಂ.ಬಿ.ಪಾಟೀಲರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಇದೇ ರೀತಿ ಸಮವಸ್ತ್ರ ಇರಬೇಕು ಎಂದು ಈ ಹಿಂದೆ ಬಿಜೆಪಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ. ಇಡಿ ದೇಶದಲ್ಲಿ ಎಲ್ಲಿಯೂ ಈ ವಿಷಯ ಇಲ್ಲ, ಕರ್ನಾಟಕದಲ್ಲಿ ಯಾಕೆ ಎಂದು ಪ್ರಶ್ನಿಸಿದರು.ಇದು ಇವರೇ ತೆಗೆದಿದ್ದು, ಈ ವಿಚಾರ ಕಾಂಗ್ರೆಸ್‌ಗೆ ಲೋಕಸಭೆಯಲ್ಲಿ ನಿಶ್ಚಿತವಾಗಿ ಮುಳುವಾಗಲಿದೆ. ಈ ರೀತಿ ಕೋಮು ಆಧಾರದ ಮೇಲೆ ಮಕ್ಕಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದ ವರ್ಗದ ಶಾಲಾ ಮಕ್ಕಳಿಗೆ ಪ್ರವಾಸಕ್ಕೆ ಕಳಿಸುತ್ತೀರಿ. ಬಡವರು ಸೇರಿದಂತೆ ಎಲ್ಲಾ ಮಕ್ಕಳನ್ನೂ ಕಳಿಸಬೇಕು. ಆಗ ಮಕ್ಕಳಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ. ಪ್ರತ್ಯೇಕವಾಗಿ ಕಳಿಸುವುದರಿಂದ ಮಕ್ಕಳನ್ನು ಪ್ರತ್ಯೇಕ ಇಡುತ್ತಿದ್ದೀರಿ. ಎಲ್ಲಾ ಸಮುದಾಯದ ಮಕ್ಕಳು ಕೂಡಿ ಓದಬೇಕು, ಕೂಡಿ ಊಟ ಮಾಡಬೇಕು, ಕೂಡಿ ಆಟವಾಡಬೇಕು. ಅಂದಾಗ ಮಾತ್ರ ಸಮಾನತೆ ಬರುತ್ತದೆ. ಸುಮ್ಮಸುಮ್ಮನೆ ಸಮಾನತೆ ಬರಲ್ಲ ಎಂದು ವಾಗ್ದಾಳಿ ನಡೆಸಿದರು.
ರೈತರ ಕುರಿತು ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕರು, ಇದು ದುರ್ದೈವ. ಯಾಕಂದ್ರೆ ಹಿಂದೆ ಶಿವಾನಂದ ಪಾಟೀಲ ರೈತರ ಆತ್ಮಹತ್ಯೆ ಬಗ್ಗೆಯೂ ಮಾತನಾಡಿದ್ದರು. ಇಂದು ಬರಗಾಲವನ್ನು ರೈತರು ಬಯಸುತ್ತಾರೆ ಅಂದ್ರೆ ಇದನ್ನು ಯಾವ ರೀತಿ ಖಂಡನೆ ಮಾಡಬೇಕು ಗೊತ್ತಾಗುತ್ತಿಲ್ಲ. ಈ ರೀತಿ ಒಬ್ಬ ಜವಾಬ್ದಾರಿಯುತ ಮಂತ್ರಿಗಳು ರೈತರ ಬಗ್ಗೆ ಇಷ್ಟು ಹಗುರವಾಗಿ ಮಾತನಾಡಿರುವುದು ಸರಿ ಅಲ್ಲ ಎಂದು ದೂರಿದರು.