ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ಸಚಿವ ಮಧು ಬಂಗಾರಪ್ಪ

KannadaprabhaNewsNetwork |  
Published : Jun 17, 2025, 02:44 AM ISTUpdated : Jun 17, 2025, 02:45 AM IST
ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಬಳ್ಳಾರಿ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಜೊತೆ ಬಿಸಿಯೂಟ ಸವಿದರು. ಜಿ.ಪಂ. ಮಹಮ್ಮದ್ ಹ್ಯಾರೀಸ್ ಸುಮೈರ್, ಅಲ್ಲಂ ಪ್ರಶಾಂತ್ ಇದ್ದರು.  | Kannada Prabha

ಸಾರಾಂಶ

ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಜತೆ ಕುಳಿತು ಮಧ್ಯಾಹ್ನದ ಬಿಸಿಯೂಟ ಸವಿದರು.

ಬಳ್ಳಾರಿ ಪಟೇಲ್‌ ನಗರದ ಸರ್ಕಾರಿ ಶಾಲೆಗೆ ಭೇಟಿ

7ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದ

ಶಾಲೆಯ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಅಭಿಪ್ರಾಯ ಸಂಗ್ರಹ

ಸಂವಿಧಾನ ಪೀಠಿಕೆ ವಾಚನ ಮಾಡಿದ 5ನೇ ತರಗತಿ ವಿದ್ಯಾರ್ಥಿನಿಕನ್ನಡಪ್ರಭ ವಾರ್ತೆ ಬಳ್ಳಾರಿ

ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಜತೆ ಕುಳಿತು ಮಧ್ಯಾಹ್ನದ ಬಿಸಿಯೂಟ ಸವಿದರು.

ಊಟದಲ್ಲಿ ಅನ್ನ, ಸಾಂಬಾರು ಜತೆಗೆ ಉಪ್ಪಿನಕಾಯಿ ಮತ್ತು ಮೊಟ್ಟೆ ನೀಡಲಾಗಿತ್ತು. ಇದೇ ವೇಳೆ ಊಟದ ರುಚಿಯ ಬಗ್ಗೆ ಮಕ್ಕಳನ್ನು ಕೇಳಿದರು.

ಇದಕ್ಕೂ ಮುನ್ನ 7ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಶಾಲೆಯ ಶೈಕ್ಷಣಿಕ ಗುಣಮಟ್ಟ, ಆರೋಗ್ಯ ಹಾಗೂ ಶಾಲೆಯಲ್ಲಿ ದೊರೆಯುತ್ತಿರುವ ಸೌಕರ್ಯಗಳ ಕುರಿತು ಅಭಿಪ್ರಾಯ ಪಡೆದುಕೊಂಡರು.

ಮಕ್ಕಳು ದಿನಾಲೂ ಶಾಲೆಗೆ ಬರಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ತಪ್ಪಿಸಬಾರದು. ಮನೆಯಲ್ಲಿ ಶಾಲೆಗೆ ಹೋಗಲು ಅಡ್ಡಿಪಡಿಸಿದರೆ, ನಾನು ತಪ್ಪದೇ ಶಾಲೆಗೆ ಹೋಗುತ್ತೇನೆ ಎಂದು ಹೇಳಬೇಕು. ಶಾಲೆಯಲ್ಲಿ ದೊರೆಯುವ ಶಿಕ್ಷಣ ಪಡೆದು, ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಪಠ್ಯದ ಜತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸಾಧಕರ ಪುಸ್ತಕಗಳನ್ನು ಓದಿ ಪ್ರೇರಣೆ ತೆಗೆದುಕೊಳ್ಳಬೇಕು. ಮಕ್ಕಳ ಭವಿಷ್ಯದ ಮೇಲೆ ಪೋಷಕರು ಸಾಕಷ್ಟು ಕನಸು ಕಂಡಿರುತ್ತಾರೆ. ಪೋಷಕರ ಕನಸು ನನಸಾಗಿಸಬೇಕು. ಓದಿನ ಜತೆಗೆ ಆರೋಗ್ಯದ ಕಡೆಗೂ ಗಮನ ನೀಡಬೇಕು. ಉನ್ನತ ಶಿಕ್ಷಣ ಪಡೆದುಕೊಂಡು ದೊಡ್ಡ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಂವಿಧಾನ ಪೀಠಿಕೆ ಓದು:

ಸಂವಿಧಾನ ಪೀಠಿಕೆ ಯಾರು ಹೇಳುತ್ತೀರಾ ಎಂದು ಸಚಿವ ಎಸ್. ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಕೇಳಿದಾಗ, ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ರಿತಿಕಾ ಅವರು ಸಂವಿಧಾನ ಪೀಠಿಕೆಯನ್ನು ವಿಸ್ತಾರವಾಗಿ ವಾಚನ ಮಾಡಿದಳು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಶಂಕರ, ಡಿಡಿಪಿಐ ಬಿ. ಉಮಾದೇವಿ, ವಿಷಯ ಪರಿವೀಕ್ಷಕಿ ವೇದಾವತಿ, ಶಾಲೆಯ ಮುಖ್ಯಗುರು ಜಯಶ್ರೀ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ ಇದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ