ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಆಲಮೇಲದ ವಿದ್ಯಾರ್ಥಿ ಉದಯಕುಮಾರ ನಾರಾಯಣಕರ ಮತ್ತು ರತ್ನಾಪುರದ ಮನೋಹರ ಹರಗೆ ಅವರ ಎಂಬಿಬಿಎಸ್ ಕೋರ್ಸ್‌ನ ಬೋಧನಾ ಶುಲ್ಕ, ಊಟ ಮತ್ತು ವಸತಿ (ಹಾಸ್ಟೇಲ್ ಮತ್ತು ಮೆಸ್)ಕ್ಕೆ ಅಗತ್ಯವಾಗಿರುವ ಹಣದ ಚೆಕ್ ಅನ್ನು ಸಚಿವರು ವಿತರಿಸಿದರು. ಬಳಿಕ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಶ್ರಮವಹಿಸಿ, ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಣಕ್ಕೆ ಅಗತ್ಯವಾಗಿರುವ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಪೋಷಕರು ಮತ್ತು ಬಸವನಾಡು ವಿಜಯಪುರ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಆರ್.ವಿ.ಕುಲಕರ್ಣಿ ಮತ್ತು ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್.ಎಸ್.ಪಾಟೀಲ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.