ದೊಡ್ಡಬಳ್ಳಾಪುರ: ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಬುಧವಾರ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಂಡಿಯಾ ಮಾಲ್ಡೀವ್ಸ್ ಹೈ ಕಮಿಷನರ್ ಮುನು ಮಹವರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
9ಕೆಡಿಬಿಪಿ6- ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.