ಕುಂದಾಣ: ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ ೭೫ ರ ಈಚನಹಳ್ಳಿ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ, ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು.
ನಾನು ದೆಹಲಿ ಪ್ರವಾಸದಲ್ಲಿದ್ದ ಕಾರಣ ಮೃತರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಇಂದು ಸ್ಥಳೀಯ ಮುಖಂಡರೊಂದಿಗೆ ಮೃತ ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದೇನೆ. ಇದಕ್ಕೆ ಯಾವುದೇ ರಾಜಕೀಯ ಬೆರೆಸುವುದು ಬೇಡ. ಮಾನವೀಯತೆ ದೃಷ್ಟಿಯಲ್ಲಿ ಯಾರೇ ಸಹಕಾರ ನೀಡಿದರೂ ಸ್ವಾಗತಾರ್ಹ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಮೇ ೨೬ರಂದು ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ ೭೫ರ ಈಚನಹಳ್ಳಿ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತವಾಗಿ ಒಂದೇ ಕುಟುಂಬದ ೬ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಸಾವಿಗೀಡಾದವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿಯ ಕಾರಹಳ್ಳಿ ಗ್ರಾಮದ ಮೃತರ ಮನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ ನೀಡಿ ಕುಟುಂಬ ನಿರ್ವಹಣೆಗೆ 2.50 ಲಕ್ಷ ನಗದು ಹಣ ನೀಡಿ ನೆರವಾದರು.ಮೃತ ಕುಟುಂಬದ ಮಕ್ಕಳನ್ನು ಸರ್ಕಾರದ ವಸತಿ ಶಾಲೆಗೆ ಸೇರಿಸಿ ಮುಂದಿನ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಸರ್ಕಾರ ಬರಿಸುತ್ತದೆ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣಕಾಸು ನೆರವು ಕೊಡಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಯಪ್ಪ ಅಧ್ಯಕ್ಷ ಶಾಂತಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ,ಕಾರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಖಾದಿ ಬೋರ್ಡ್ ಅಧ್ಯಕ್ಷ ಜಯರಾಮೇಗೌಡ, ದೇವನಹಳ್ಳಿ ಪುರಸಭಾ ಮಾಜಿ ಅಧ್ಯಕ್ಷ ಎಂ.ಎನ್. ನಾರಾಯಣಸ್ವಾಮಿ, ಕೆಂಪಣ್ಣ, ಇನ್ನು ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.೦೧ ಕುಂದಾಣ ೦೧ ಚಿತ್ರಸುದ್ದಿ;
ದೇವನಹಳ್ಳಿ ತಾಲ್ಲೂಕು ಕಾರಹಳ್ಳಿ ಗ್ರಾಮದ ನಿವಾಸಿಗಳು ಇತ್ತೀಚೆಗೆ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಮೃತರ ಮನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ತಾಲ್ಲೂಕು ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.