ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮುನಿಯಪ್ಪ ಚಾಲನೆ

KannadaprabhaNewsNetwork | Published : Mar 17, 2025 12:33 AM

ಸಾರಾಂಶ

ದೊಡ್ಡಬಳ್ಳಾಪುರ: ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ, ಎಸ್.ಸಿ‌.ಪಿ- ಟಿ.ಎಸ್. ಪಿ ಅನುದಾನ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಯೋಜನೆಗಳಡಿ ಸುಮಾರು ₹6.89 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಶನಿವಾರ ಚಾಲನೆ ನೀಡಿದರು.

ಚನ್ನರಾಯಪಟ್ಟಣ ಹೋಬಳಿಯ ಐಬಾಸಪುರ ಗ್ರಾಪಂ ವ್ಯಾಪ್ತಿಯಲ್ಲಿ ₹112.5 ಲಕ್ಷ ವೆಚ್ಚದ 7 ಕಾಮಗಾರಿ, ಚನ್ನರಾಯಪಟ್ಟಣ ಗ್ರಾಪಂ ವ್ಯಾಪ್ತಿಯಲ್ಲಿ ₹95 ಲಕ್ಷ ವೆಚ್ಚದ 05 ಕಾಮಗಾರಿ, ಯಲಿಯೂರು ಗ್ರಾಪಂ ವ್ಯಾಪ್ತಿಯಲ್ಲಿ ₹50 ಲಕ್ಷದ 04 ಕಾಮಗಾರಿ, ನಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ₹87 ಲಕ್ಷದ 07 ಕಾಮಗಾರಿ, ಬೆಟ್ಟಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ₹30 ಲಕ್ಷ ವೆಚ್ಚದ 03 ಕಾಮಗಾರಿ, ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ₹17 ಲಕ್ಷ ವೆಚ್ಚದ 02 ಕಾಮಗಾರಿ, ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹131 ಲಕ್ಷ ವೆಚ್ಚದ 12 ಕಾಮಗಾರಿ, ಚನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹187 ಲಕ್ಷ ಮೊತ್ತದ 08 ಕಾಮಗಾರಿ ಸೇರಿ ಒಟ್ಟು ₹689.5 ಲಕ್ಷ ಮೊತ್ತದ 48 ಕಾಮಗಾರಿಳನ್ನು ಒಳಗೊಂಡ ವಿವಿಧ ಸಿಸಿ ರಸ್ತೆ, ಕಾಂಕ್ರೀಟ್ ರಸ್ತೆ, ಚರಂಡಿ, ಸಮುದಾಯ ಭವನ, ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಮಾಜಿ ಜಿಪಂ ಸದಸ್ಯ ಲಕ್ಷ್ಮೀ ನಾರಾಯಣಪ್ಪ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

15ಕೆಡಿಬಿಪಿ2

ಬೆಂ.ಗ್ರಾ ಜಿಲ್ಲೆಯ ವಿವಿಧೆಡೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.

Share this article