ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ನಡೆದ ಲಿಂಗಾಯತ ರೆಡ್ಡಿ ಸಮುದಾಯದ ವತಿಯಿಂದ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಲಿಂಗಾಯತ ರೆಡ್ಡಿ ಸಮುದಾಯ ನಾಯಕರು ರಾಜಕೀಯವಾಗಿ ಪ್ರಭಾವಿಗಳಾಗಿದ್ದು, ಅಭಿವೃದ್ಧಿಯ ಪರವಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಖರ್ಗೆ ಸಾಹೇಬರು ಸೋತಿದ್ದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಹೀಗಾಗಿ ನೀವೆಲ್ಲ ಈ ಸಲ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಹಕರಿಸಿ ಎಂದು ವಿನಂತಿಸಿದರು.ತಾವು ಅಪ್ಪಟ ಬಸವ ಪ್ರೇಮಿಯಾಗಿದ್ದು, ಅವರ ತತ್ವಗಳಲ್ಲಿ ಅಪಾರ ನಂಬಿಕೆ ಇಟ್ಟುಕೊಂಡಿರುವುದಾಗಿ ಹೇಳಿದ ಖರ್ಗೆ, ಹಿಂದಿನ ಬಿಜೆಪಿ ಸರ್ಕಾರ ಪಠ್ಯಗಳಲ್ಲಿ ಬಸವಣ್ಣನವರ ಕುರಿತ ಪಾಠಗಳನ್ನು ಕೈಬಿಟ್ಟಾಗ ಪ್ರತಿಭಟನೆ ಮಾಡಿರುವುದಾಗಿ ನೆನಪಿಸಿಕೊಂಡರು. ಸಚಿವ ಶರಣಬಸಪ್ಪ ದರ್ಶನಾಪುರ ಅವರೊಂದಿಗೆ ಸಿಎಂ ಅವರೊಂದಿಗೆ ಚರ್ಚಿಸಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಘೋಷಿಸಲು ಶ್ರಮಿಸಿದ್ದಾಗಿ ಹೇಳಿದರು.
ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ರಾಮಲಿಂಗಾರೆಡ್ಡಿ ಮಾತನಾಡಿ, ಸಮುದಾಯದ ಬಂಧುಗಳು ಧರ್ಮಗಳ ನಡುವೆ ಭಿನ್ನತೆ ಮೂಡಿಸುವ ಬಿಜೆಪಿಯನ್ನು ತಿರಸ್ಕರಿಸಿ ಎಲ್ಲರನ್ನೂ ಒಂದಾಗಿ ತೆಗೆದುಕೊಂಡು ಹೋಗುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಬಸವಣ್ಣನವರ ಹಾಗೂ ಹೇಮರೆಡ್ಡಿ ಮಲ್ಲಮ್ಮನವರ ಸಮಾನತೆ ತತ್ವವನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.
ವೇದಿಕೆಯ ಮೇಲೆ ಭಾಗನಗೌಡ ಸಂಕನೂರು, ಡಾ ಕಾಮರೆಡ್ಡಿ, ವೀರನಗೌಡ ಪರಸರೆಡ್ಡಿ ಸೇರಿದಂತೆ ಹಲವರಿದ್ದರು.