ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಒತ್ತಾಯ

KannadaprabhaNewsNetwork |  
Published : May 25, 2025, 01:18 AM IST
ರಾಯಬಾಗ | Kannada Prabha

ಸಾರಾಂಶ

ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ಗುಂಡಾಗಿರಿ ಹೆಚ್ಚಿದೆ. ಸರ್ಕಾರ ನೈತಿಕತೆ ಕಳೆದುಕೊಂಡಿದೆ

ಕನ್ನಡಪ್ರಭ ವಾರ್ತೆ ರಾಯಬಾಗ

ಕಲಬುರ್ಗಿಯಲ್ಲಿ ಇತ್ತಿಚೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ, ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ಗುಂಡಾಗಿರಿ ಹೆಚ್ಚಿದೆ. ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಪ್ರತಿಪಕ್ಷ ನಾಯಕರಿಗೆ ರಕ್ಷಣೆ ಕೊಡಲಾಗದ ಗೃಹ ಸಚಿವ ಡಾ.ಪರಮೇಶ್ವರ ಅವರು ಹಾಗೂ ಗೂಂಡಾವರ್ತನೆ ತೋರುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕುಂಠಿತಗೊಂಡಿದೆ. ಬಿಜೆಪಿ ಸರ್ಕಾರ ರೈತರಿಗೆ ನೀಡುತ್ತಿದ್ದ ಎಲ್ಲ ಯೋಜನೆಗಳನ್ನು ಸ್ಥಗಿತಗೊಳಿಸಿದೆ. ಎಸ್‌ಸಿಪಿಟಿಎಸ್‌ಪಿ ಯೋಜನೆಯಡಿ ಎಸ್‌ಸಿ ಜನಾಂಗದವರಿಗೆ ನೀಡಬೇಕಿರುವ ₹40 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡು ದಲಿತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ರಾಜ್ಯದಲ್ಲಿ ಪೊಲೀಸ್‌ ವ್ಯವಸ್ಥೆ ಸಂಪೂರ್ಣ ವಿಫಲಗೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ವಿರೋಧ ಪಕ್ಷದ ನಾಯಕರಿಗೆ ಸೂಕ್ತ ರಕ್ಷಣೆ ನೀಡಬೇಕೆಂದರು.

ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ರೂಪಿಸಿರುವ ಚಾರ್ಜಸೀಟ್‌ನ್ನು ಬಿಜೆಪಿ ಮುಖಂಡರು ಬಿಡುಗಡೆಗೊಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ ಪಾಟೀಲ, ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಭರತೇಶ ಬನವಣೆ, ಎಲ್.ಬಿ.ಚೌಗುಲೆ, ಅಮೃತ ಕುಲಕರ್ಣಿ, ಸದಾಶಿವ ಘೋರ್ಪಡೆ, ರಾಜಶೇಖರ ಖನದಾಳೆ, ಸದಾನಂದ ಹಳಿಂಗಳಿ, ಅಪ್ಪಾಸಾಬ ಬ್ಯಾಕೂಡೆ,ಮಹಾನಿಂಗ ಹಂಜಿ, ಸಂಗಣ್ಣ ದತ್ತವಾಡೆ, ಬಸವರಾಜ ಡೊಣವಾಡೆ ಹಾಗೂ ಬಿಜೆಪಿ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ