ಕಾರ್ಯಕರ್ತರೇ ಪಕ್ಷದ ಆಸ್ತಿ: ಬಿ. ರಮಾನಾಥ ರೈ

KannadaprabhaNewsNetwork |  
Published : Mar 04, 2026, 03:00 AM IST
ಬ್ರಹ್ಮರ ಕೂಟ್ಲು ಟೋಲ್ ಸಂಗ್ರಹದ ವಿರುದ್ಧ ಹೋರಾಟ | Kannada Prabha

ಸಾರಾಂಶ

ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಕಾಂಗ್ರೆಸ್ ಪಕ್ಷದ ಮೂಲ ಮಂತ್ರ ಬಡತನ ನಿರ್ಮೂಲನೆ, ಸಾಮಾಜಿಕ ಕಳಕಳಿ, ಸಮಾನತೆ. ಈ ಅಂಶಗಳನ್ನು ಪಕ್ಷ ಯಶಸ್ವಿಯಾಗಿ ಅನುಷ್ಠಾನಿಸಿದೆ. ಈಗ ಪಂಚ ಗ್ಯಾರಂಟಿಗಳ ಮೂಲಕ ಕಾಂಗ್ರೆಸ್‌ ಜನಕಲ್ಯಾಣದ ಮಹತ್ತರ ಸಾಧನೆ ಮಾಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಕಾರ್ಯಕರ್ತರೆ ಬಹುದೊಡ್ಡ ಆಸ್ತಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಮೂಲ್ಕಿ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಕಾಂಗ್ರೆಸ್ ಪಕ್ಷದ ಮೂಲ ಮಂತ್ರ ಬಡತನ ನಿರ್ಮೂಲನೆ, ಸಾಮಾಜಿಕ ಕಳಕಳಿ, ಸಮಾನತೆ. ಈ ಅಂಶಗಳನ್ನು ಪಕ್ಷ ಯಶಸ್ವಿಯಾಗಿ ಅನುಷ್ಠಾನಿಸಿದೆ. ಈಗ ಪಂಚ ಗ್ಯಾರಂಟಿಗಳ ಮೂಲಕ ಕಾಂಗ್ರೆಸ್‌ ಜನಕಲ್ಯಾಣದ ಮಹತ್ತರ ಸಾಧನೆ ಮಾಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಕಾರ್ಯಕರ್ತರೆ ಬಹುದೊಡ್ಡ ಆಸ್ತಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಹಳೆಯಂಗಡಿಯಲ್ಲಿರುವ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

7ರಂದು ಜರಗಲಿರುವ ಬಂಟ್ವಾಳ ಕಂಬಳಕ್ಕೆ ಕಾರ್ಯಕರ್ತರನ್ನು ಅಹ್ವಾನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳ ಕಂಬಳ ವೀಕ್ಷಣೆ ಮಾಡಲಿದ್ದು ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕೆಂದು ಹೇಳಿದರು. ಬಿ ಸಿ ರೋಡ್ ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರ ಕೂಟ್ಲು ಟೋಲ್ ಸಂಗ್ರಹ ಕೇಂದ್ರವನ್ನು ಕೂಡಲೇ ಕೇಂದ್ರ ಸರ್ಕಾರ ಮುಚ್ಚಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಳೆದ ಹಲವಾರು ವರ್ಷಗಳಿಂದ ಬಂಟ್ವಾಳ ಬ್ರಹ್ಮರ ಕೂಟ್ಲು ಟೋಲ್ ಸಂಗ್ರಹ ಕೇಂದ್ರ ಕಾರ್ಯಾಚರಿಸುತ್ತಿದ್ದು ಕೇಂದ್ರ ಸರ್ಕಾರ ಬಡ ವಾಹನ ಸವಾರರ ಮೇಲೆ ಗದಾ ಪ್ರಹಾರ ನಡೆಸುತ್ತಿದೆ. ಟೋಲ್ ಸಂಗ್ರಹ ಕೇಂದ್ರವನ್ನು ಮುಚ್ಚಲು ಮಂಗಳವಾರ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು. ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಈ ಬಗ್ಗೆ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬೆಂಬಲ ಬೇಕೆಂದು ವಿನಂತಿಸಿದರು.

7 ರಂದು ನಡೆಯಲಿರುವ ಬಂಟ್ವಾಳ ಮೂಡೂರು ಪಡೂರು ಕಂಬಳ ಆಮಂತ್ರಣ ಪತ್ರಿಕೆಯನ್ನು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ನೀಡಿದರು. ಈ ಸಂದರ್ಭ ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಕಾಂಗ್ರೆಸ್ ಸಹಕಾರಿ ವಿಭಾಗದ ಜಿಲ್ಲಾಧ್ಯಕ್ಷ ಸುದರ್ಶನ್ ಜೈನ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಿಲ್ಮಾ ಡಿಕೋಸ್ಟ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ ಮತ್ತಿತರರು ಉಪಸ್ಥಿತರಿದ್ದರು. ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಸ್ವಾಗತಿಸಿದರು, ಮಹಿಳಾ ಅಧ್ಯಕ್ಷೆ ವಿಲ್ಮಾ ಡಿ ಕೋಸ್ಟ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದ ಸ್ವಾಸ್ಥ್ಯ ಕಾಪಾಡಿದ ಮಠಗಳು
ಸರ್ಕಾರ, ಅಧಿಕಾರಿಗಳ ಧೋರಣೆಯಿಂದ ಕನ್ನಡ ಶಾಲೆ ಅವನತಿ: ಉಮಾನಾಥ ಕೋಟ್ಯಾನ್‌