ಮಾಹಿತಿ ಇಲ್ಲದೆ ಬಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸಚಿವ ರಾಯರಡ್ಡಿ ತರಾಟೆ

KannadaprabhaNewsNetwork |  
Published : Nov 18, 2026, 02:00 AM IST
ಸಭೆಯನ್ನು ಉದ್ದೇಶಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಮಾತನಾಡಿದರು | Kannada Prabha

ಸಾರಾಂಶ

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಸಮರ್ಪಕ ಮಾಹಿತಿ ಇಲ್ಲದೆ ಹಾಜರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತೀವ್ರ ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಗದಗ

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಸಮರ್ಪಕ ಮಾಹಿತಿ ಇಲ್ಲದೆ ಹಾಜರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತೀವ್ರ ತರಾಟೆಗೆ ತೆಗೆದುಕೊಂಡರು.

ಕಾಮಗಾರಿಗಳ ಸ್ಥಿತಿಗತಿ, ವೆಚ್ಚ ಹಾಗೂ ಅನುದಾನ ಬಳಕೆಯ ವಿವರಗಳಿಲ್ಲದೆ ಬಂದಿದ್ದ ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ ನಾಯ್ಕ ಅವರನ್ನು ಸಚಿವರು ಖಾರವಾಗಿ ಪ್ರಶ್ನಿಸಿದರು. ಅಲ್ಲದೆ, ಗದಗ ತಾಲೂಕು ಪರಿಶೀಲನೆಗೆ ಎಇಇ ಬದಲಿಗೆ ಜೆಇ ಹಾಜರಾಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ತಕ್ಷಣವೇ ರಾಜ್ಯ ಪಿಡಬ್ಲ್ಯುಡಿ ಕಾರ್ಯದರ್ಶಿಗೆ ಕರೆ ಮಾಡಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕೆಆರ್‌ಐಡಿಎಲ್, ಕರ್ನಾಟಕ ಗೃಹ ಮಂಡಳಿ, ನಿರ್ಮಿತಿ ಕೇಂದ್ರ ಹಾಗೂ ಪಿಎಂಜಿಎಸ್‌ವೈ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ಮತ್ತು ಪೂರ್ಣಗೊಂಡ ಕಾಮಗಾರಿಗಳು, ವೆಚ್ಚವಾದ ಹಾಗೂ ಉಳಿಕೆ ಅನುದಾನದ ಸಮಗ್ರ ವರದಿಯನ್ನು ಮರುದಿನದ ಸಭೆಗೆ ಕಡ್ಡಾಯವಾಗಿ ಸಲ್ಲಿಸುವಂತೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಪ್ರತಿ ವರ್ಷ ಬರುವ ಅನುದಾನದಡಿ ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಾದ್ಯಂತ ಎಷ್ಟು ಸಸಿಗಳನ್ನು ನೆಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ನೀಡುವಂತೆ ಅರಣ್ಯ ಇಲಾಖೆಗೆ ಸೂಚಿಸಿದ ಸಚಿವರು, ಖುದ್ದಾಗಿ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಪಂ ಸಿಇಒ ಮುಕುಲ್ ಜೈನ್, ಎಸ್ಪಿ ಮಿಥುನ್ ಎಚ್.ಎನ್., ಎಡಿಸಿ ಡಾ. ದುರಗೇಶ್ ಕೆ.ಆರ್., ಜಿಪಂ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲಾಶ್ರೀ ಉತ್ತಮ ವೇದಿಕೆ: ಜಿಪಂ ಸಿಇಒ
ತೋಂಟದ ಸಿದ್ಧಲಿಂಗ ಶ್ರೀಗೆ ಮಕ್ಕಳ ಬಗ್ಗೆ ಅಪಾರ ಕಾಳಜಿ ಇತ್ತು: ಈಶಣ್ಣ ಬೆಟಗೇರಿ