ಗ್ಯಾರಂಟಿಯಿಂದ ಜನರ ಜೀವನಮಟ್ಟ ಸುಧಾರಣೆ: ಎಚ್.ಎಂ. ರೇವಣ್ಣ

KannadaprabhaNewsNetwork |  
Published : Dec 25, 2025, 03:00 AM IST
ಕಾರ್ಯಕ್ರಮ ಉದ್ಘಾಟಿಸುತ್ತಿರುವ ಎಚ್‌.ಎಂ. ರೇವಣ್ಣ. | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ಮಂಗಳವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕಾರ್ಯಗಾರ

ಮಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ಮಂಗಳವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿಯವರ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ಆರ್ಥಿಕ ಸ್ವಾತಂತ್ರ್ಯದಲ್ಲಿ ಇಂದಿರಾ ಗಾಂಧಿ ಅವರ ಕೊಡುಗೆ ಸ್ಮರಣೀಯ ಎಂದು ಹೇಳಿದರು.

ರಾಜ್ಯದ ಜನತೆಗೆ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಮೂದಲಿಸುವುದು ಸರಿಯಲ್ಲ. ರಾಜ್ಯ ಸರ್ಕಾರ ಜನಸಾಮಾನ್ಯರ ಆರ್ಥಿಕ ಬದುಕಿಗೆ ಒತ್ತುಕೊಟ್ಟು, ಅವರನ್ನು ಆರ್ಥಿಕ ಸಬಲರನ್ನಾಗಿಸಿದೆ ಎಂದರು.

ಜಾಗೃತ ಕರ್ನಾಟಕದ ಸಂಚಾಲಕ ಡಾ. ವಾಸು ಎಚ್.ವಿ. ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತದೆಯೇ ವಿನಾ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಜನಸಮುದಾಯಕ್ಕೆ ಕೊಳ್ಳುವ ಶಕ್ತಿ ಜಾಸ್ತಿ ಬಂದರೆ ಮಾತ್ರ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ., ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿವಿಧ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಜಯಂತಿ ಬಿ.ಎ, ಉಮಾನಾಥ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಶಾಹುಲ್ ಹಮೀದ್, ಸುಧೀರ್ ಕುಮಾರ್ ಶೆಟ್ಟಿ, ಸುರೇಂದ್ರ ಬಿ. ಕಂಬಳಿ, ಅರುಣ್ ಕುಮಾರ್ ಶೆಟ್ಟಿ, ಎಸ್.ರಫೀಕ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ
ಚಳಿ ಹೆಚ್ಚಿದಂತೆ ಏರುತ್ತಿದೆ ಮೊಟ್ಟೆ ದರ