ಅಧಿಕಾರಿಗಳು ಸಾರ್ವಜನಿಕರ ಭೇಟಿಗೆ ಲಭ್ಯವಿರಲು ಸಚಿವರ ಸೂಚನೆ

KannadaprabhaNewsNetwork |  
Published : Aug 24, 2026, 01:15 AM IST
23ಕೆಆರ್ ಎಂಎನ್ 4.ಜೆಪಿಜಿ ಸಚಿವ ಬಾಲಕೃಷ್ಣ | Kannada Prabha

ಸಾರಾಂಶ

ರಾಮನಗರ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಸಾರ್ವಜನಿಕರ ಭೇಟಿಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ

ರಾಮನಗರ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಸಾರ್ವಜನಿಕರ ಭೇಟಿಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ಕಚೇರಿಗಳಿಗೆ ಕೆಲಸ-ಕಾರ್ಯಗಳ ನಿಮಿತ್ತ ಸಾರ್ವಜನಿಕರು ಭೇಟಿ ನೀಡಿದ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಪದೇಪದೇ ಮೇಲಧಿಕಾರಿಗಳ ಸಭೆಗೆ ತೆರಳಿರುವುದಾಗಿ ಅಥವಾ ಕ್ಷೇತ್ರ ಭೇಟಿಗೆ ತೆರಳಿರುವುದಾಗಿ ತಿಳಿಸಿ, ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ ಎಂಬ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಇದರಿಂದ ಸಾರ್ವಜನಿಕರು ತಮ್ಮ ಕೆಲಸ-ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಸಿಕೊಳ್ಳಲು ತೀವ್ರ ತೊಂದರೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಹಾಗೂ ಆಡಳಿತಾತ್ಮಕ ಸೌಲಭ್ಯಗಳು ಸಮರ್ಪಕವಾಗಿ ಮತ್ತು ಸಕಾಲದಲ್ಲಿ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಅಧಿಕಾರಿಗಳು ಪ್ರತಿದಿನ ನಿಗದಿತ ಅವಧಿಯಲ್ಲಿ ಕಚೇರಿಯಲ್ಲಿ ಕಡ್ಡಾಯವಾಗಿ ಲಭ್ಯವಿದ್ದು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ಒದಗಿಸಬೇಕೆಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ ಸಭೆಗಳನ್ನು ಪೂರ್ವಾಹ್ನ 10ರಿಂದ ಮಧ್ಯಾಹ್ನ 3.30 ಗಂಟೆಯೊಳಗೆ ಮಾತ್ರ ಆಯೋಜಿಸುವಂತೆ, ಸಾರ್ವಜನಿಕರ ಭೇಟಿಗೆ ನಿಗದಿಪಡಿಸಿರುವ ಅಪರಾಹ್ನ 3.30 ಗಂಟೆಯಿಂದ ಸಂಜೆ 5.30 ಗಂಟೆಯಲ್ಲಿ ಯಾವುದೇ ಸಭೆಗಳನ್ನು ಆಯೋಜಿಸಬೇಕು. ಈ ಸೂಚನೆಗಳನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಹಾಗೂ ಸಾರ್ವಜನಿಕರ ಭೇಟಿಗೆ ನಿಗದಿಪಡಿಸಿರುವ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಸಂಬಂಧಿಸಿದ ಮೇಲಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ, ಖಚಿತ ಪಡಿಸಿಕೊಳ್ಳಬೇಕು.

ಸಾರ್ವಜನಿಕರಿಗೆ ಅನಗತ್ಯ ವಿಳಂಬ ಅಥವಾ ತೊಂದರೆ ಉಂಟಾಗದಂತೆ, ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ವ್ಯವಸ್ಥೆ ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಸೂಕ್ತ ಕ್ರಮವಹಿಸುವಂತೆ ಸಚಿವ . ಬಾಲಕೃಷ್ಣ ನಿರ್ದೇಶನ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಬುರಗಿಯಲ್ಲಿ ಉದ್ಯಮಿ ಪಾಟೀಲ್‌ ಪುಣ್ಯಸ್ಮರಣೆ
224 ಕ್ಷೇತ್ರಗಳ ಅಂತರ್ಜಲ ಹೆಚ್ಚಳಕ್ಕೆ ಯೋಜನೆ: ಡಾ.ಅಜಯ್‌ ಧರಂಸಿಂಗ್‌