ಹಳೆ ಹುಬ್ಬಳ್ಳಿ ಹೈಟೆಕ್ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ: ಕಾಮಗಾರಿ ಪರಿಶೀಲನೆ

KannadaprabhaNewsNetwork |  
Published : Nov 08, 2026, 02:00 AM IST
ಹಳೆ ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆಗಳ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. | Kannada Prabha

ಸಾರಾಂಶ

ಹಳೆ ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಸಮರ್ಪಕ ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಭವಿಷ್ಯದಲ್ಲಿ ಸಂಜೀವಿನಿಯಾಗಿ ರೂಪುಗೊಳ್ಳಲಿದೆ.

ಹುಬ್ಬಳ್ಳಿ:

ಹಳೆ ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಸಮರ್ಪಕ ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಭವಿಷ್ಯದಲ್ಲಿ ಸಂಜೀವಿನಿಯಾಗಿ ರೂಪುಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು.

ಹಳೆ ಹುಬ್ಬಳ್ಳಿಯಲ್ಲಿರುವ ನಿರ್ಮಾಣ ಹಂತದ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿ, ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆ ಆರಂಭಕ್ಕೆ ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಧುನಿಕ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳು ಹಾಗೂ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವುದು ಅತ್ಯಂತ ಮುಖ್ಯವಾಗಿದೆ. ಆಸ್ಪತ್ರೆಯು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಳೆ ಹುಬ್ಬಳ್ಳಿಯಲ್ಲಿದ್ದ 12 ಹಾಸಿಗೆಗಳ ಆಸ್ಪತ್ರೆಯನ್ನು 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಮೂಲಕ ದೂರದೃಷ್ಟಿಯ ಹೆಜ್ಜೆ ಇಡಲಾಗಿದೆ. ಈ ಯೋಜನೆಯಿಂದ ಹಳೆ ಹುಬ್ಬಳ್ಳಿ ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳ ಸಾವಿರಾರು ಜನರಿಗೆ ಉತ್ತಮ ವೈದ್ಯಕೀಯ ಸೇವೆ ಸ್ಥಳೀಯವಾಗಿಯೇ ಲಭ್ಯವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಮುಂದಿನ ಹಂತದ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಕಾಮಗಾರಿಯನ್ನು ಸಮರ್ಪಕವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ