ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, ಕಂದಾಯ ಮತ್ತು ಅರಣ್ಯ ಸಮಸ್ಯೆ ಬಗ್ಗೆ ಪ್ರಸ್ತಾಪ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಈ ಜಿಲ್ಲೆಯಲ್ಲಿ ಭಾರತದ ಭೂಪಟದಲ್ಲಿ ಗುರುತಿಸುವ ಕೆಲಸ ಮಾಡುವುದಾಗಿ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಭೇಟಿ ನೀಡಿ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಚಿಕ್ಕಮಗಳೂರಿಗೆ ಇನ್ನೂ 2 ಬಾರಿ ಭೇಟಿ ನೀಡಿದರೆ ನನಗೆ ಇಲ್ಲಿನ ಸ್ಪಷ್ಟ ಚಿತ್ರಣ ಸಿಗಲಿದೆ. ಈ ಜಿಲ್ಲೆಯಲ್ಲಿ ಹೆಚ್ಚು ಪ್ರವಾಸಿ ತಾಣಗಳಿವೆ. ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಇಲಾಖೆಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದರೆ ಜಿಲ್ಲೆ ಆರ್ಥಿಕ ಸಬಲೀಕರಣ ಹೊಂದಲಿದೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಜಿಲ್ಲೆಯಲ್ಲಿ ಪರಿವೀಕ್ಷಣೆ ನಡೆಸಿ ಅಗತ್ಯವಿರುವ ಅನುದಾನ ನೀಡಲಾಗುವುದು ಎಂದು ಹೇಳಿದರು.ಧಾರವಾಡ ಮತ್ತಿತರೆ ಜಿಲ್ಲೆಯಲ್ಲಿ ಇರುವಂತೆ ಈ ಜಿಲ್ಲೆಯಲ್ಲೂ ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಇರುವ ಬಗ್ಗೆ ತಿಳಿದಿದ್ದೇನೆ. ಈ ಬಗ್ಗೆ ಕಂದಾಯ ಮತ್ತು ಅರಣ್ಯ ಸಚಿವರ ಗಮನ ಸೆಳೆದು ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಮಳೆಯಿಂದ ಯಾವ ಜಿಲ್ಲೆಯಲ್ಲಿ ಎಷ್ಟು ಹಾನಿಯಾಗಿದೆ ಎಂಬ ಬಗ್ಗೆ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ. ಹೀಗಾಗಿಯೇ ನಾನು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಮಳೆ ಹಾನಿ ಪರಿಶೀಲನೆ ನಡೆಸಿ ವಾಸ್ತವವಾಗಿ ಯಾವ ಜಿಲ್ಲೆಗೆ ಎಷ್ಟು ಅನುದಾನ ನೀಡಬೇಕು ಎಂದು ನಿರ್ಧರಿಸುತ್ತಿದ್ದೇವೆ ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಅವರು ಯಾವುದೇ ಜಿಲ್ಲೆಗೆ ಪ್ರವಾಸ ಕೈಗೊಂಡರೂ ಆ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತೆರಳಿ ಕಾರ್ಯಕರ್ತರ ಭೇಟಿ ಮಾಡುವ ಪರಿಪಾಠವನ್ನು ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿದ್ದಾರೆ. ಇದರಿಂದಾಗಿ ಕಾರ್ಯಕರ್ತರಿಗೆ ಕೆಲಸ ಮಾಡಲು ಇನ್ನಷ್ಟು ಬಲ ಬಂದಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಕಾಂಗ್ರೆಸ್ ಮುಖಂಡರಾದ ಮಂಜೇಗೌಡ, ಡಾ.ವಿಜಯ್‌ಕುಮಾರ್, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ರೇಖಾ ಹುಲಿಯಪ್ಪಗೌಡ, ತನೋಜ್‌ನಾಯ್ಡು, ಪ್ರಶಾಂತ್, ಮಹಮದ್ ಹನೀಫ್, ಅಕ್ಬರ್, ಹಿರೇಮಗಳೂರು ರಾಮಚಂದ್ರ ಇದ್ದರು.--ಬಾಕ್ಸ್ ---
ಈ ರೀತಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡಿದಲ್ಲಿ ಅವರು ಯಾವುದೇ ಗೊಂದಲವಿಲ್ಲದೆ ಪಕ್ಷಕ್ಕಾಗಿ ದುಡಿಯುತ್ತಾರೆ. ಇದರಿಂದಾಗಿ ಮುಂದಿನ ವಿಧಾನಸಭೆ ಚುನಾವಣೆ ಮಾತ್ರವಲ್ಲದೆ ಎಲ್ಲ ಚುನಾವಣೆ ಗೆಲ್ಲಲು ಸಾಧ್ಯವಾಗಲಿದೆ ಎಂದು ಹೇಳಿದರು.
8 ಕೆಸಿಕೆಎಂ 2ಚಿಕ್ಕಮಗಳೂರಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರನ್ನು ಜಿಲ್ಲಾ ಕಾಂಗ್ರೆಸ್‌ನಿಂದ ಅಭಿನಂದಿಸ ಲಾಯಿತು. ಶಾಸಕ ಎಚ್.ಡಿ.ತಮ್ಮಯ್ಯ, ಪ್ರಮುಖರಾದ ಎಚ್.ಪಿ.ಮಂಜೇಗೌಡ, ಡಾ.ಡಿ.ಎಲ್.ವಿಜಯ್ ಕುಮಾರ್, ಹಿರೇಮಗಳೂರು ರಾಮಚಂದ್ರ ಇದ್ದರು.