ಕನ್ನಡಪ್ರಭ ವಾರ್ತೆ ಹಾಸನ
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರೇ ತನಿಖೆಯನ್ನು ಎದುರಿಸುವುದಾಗಿ ಹಾಗೂ ದೊರೆತಿರುವ ಹಣದ ಬಗ್ಗೆ ಸೂಕ್ತ ಲೆಕ್ಕ ನೀಡುವುದಾಗಿ ಹೇಳಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದ್ದು, ಸಂಪೂರ್ಣ ಮಾಹಿತಿ ಲಭ್ಯವಾಗುವವರೆಗೂ ಹೆಚ್ಚಿನ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು. ಇಡಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಯಾಗಿದ್ದು, ತನಿಖೆಯಲ್ಲಿ ಯಾವುದೇ ಅಕ್ರಮ ನಡೆದಿರುವ ಬಗ್ಗೆ ಸಾಬೀತಾಗದಿದ್ದರೆ ಈ ದಾಳಿ ಕುರಿತು ಸಾರ್ವಜನಿಕರಲ್ಲಿ ವ್ಯಕ್ತವಾಗಿರುವ ಅನುಮಾನಗಳಿಗೆ ಮತ್ತಷ್ಟು ಬಲ ಸಿಗಬಹುದು ಎಂದು ಶಿವಲಿಂಗೇಗೌಡ ತಿಳಿಸಿದರು.
ಎ.ಮಂಜು ಸಭೆಯಲ್ಲೇಕೆ ಮಾತನಾಡಲಿಲ್ಲ?ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಿ ತುಮಕೂರು ಜಿಲ್ಲೆಗೆ ಹೆಚ್ಚಿನ ಹೇಮಾವತಿ ನೀರನ್ನು ಹರಿಸಲಾಗುತ್ತಿದೆ ಎಂಬ ಮಾಜಿ ಸಚಿವ ಹಾಗೂ ಅರಕಲಗೂಡು ಶಾಸಕ ಎ.ಮಂಜು ಅವರ ಆರೋಪವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಳ್ಳಿಹಾಕಿದರು. ಹೇಮಾವತಿ ನೀರು ಬಿಡುಗಡೆ ಕುರಿತ ನಿರ್ಧಾರವನ್ನು ತಾವು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ರಾಜ್ಯ ಮಟ್ಟದಲ್ಲಿ ಜಲಸಂಪನ್ಮೂಲ ಸಚಿವರ ನೇತೃತ್ವದ ವ್ಯವಸ್ಥೆ ಇರುವುದರಿಂದ, ಅಲ್ಲಿಂದ ಬರುವ ನಿರ್ದೇಶನದಂತೆ ನೀರು ಬಿಡುಗಡೆ ಮಾಡಲಾಗುತ್ತದೆ. ನೀರಿನ ಹಂಚಿಕೆ ಕುರಿತು ಸಭೆ ಕರೆದಾಗ ಎ.ಮಂಜು ಭಾಗವಹಿಸಿದ್ದರು. ಯಾವುದೇ ಅಸಮಾಧಾನ ಅಥವಾ ಆಕ್ಷೇಪಣೆ ಇದ್ದರೆ ಸಭೆಯಲ್ಲಿಯೇ ಚರ್ಚಿಸಬೇಕಿತ್ತು. ಸಭೆಯಲ್ಲಿ ಮೌನವಾಗಿದ್ದು ಹೊರಗೆ ಬಂದು ಜನರಲ್ಲಿ ತಪ್ಪು ಸಂದೇಶ ನೀಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು. ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರು ಹರಿಸಬೇಕಾದ ಕಾನೂನು ಬದ್ಧತೆಯಿದ್ದು, ಹಾಸನ ಹಾಗೂ ತುಮಕೂರು ಜಿಲ್ಲೆಗಳ ಕೆರೆ-ಕಟ್ಟೆಗಳನ್ನು ತುಂಬಿಸುವ ಅಗತ್ಯವೂ ಇದೆ. ನೀರು ಬಿಡುಗಡೆ ಮಾಡಿದ ನಂತರ ಅದರ ಸ್ವಾಭಾವಿಕ ಹರಿವನ್ನು ನಿರ್ದಿಷ್ಟ ಸ್ಥಳದಲ್ಲಿ ತಡೆಯಲು ಸಾಧ್ಯವಿಲ್ಲ ಎಂದರು.
ಇದೇ ವೇಳೆ ಸಂಸದ ಶ್ರೇಯಸ್ ಎಂ. ಪಟೇಲ್ ಇತರರು ಇದ್ದರು.