ಸೇಡಂ ರಸ್ತೆ ಅಗಲೀಕರಣಕ್ಕೆ ಸಚಿವ ಶರಣಪ್ರಕಾಶ ಪಾಟೀಲ್‌ ಕ್ರಮ

KannadaprabhaNewsNetwork |  
Published : Sep 03, 2025, 01:00 AM IST
ಫೋಟೋ- ಶರಣಪ್ರಕಾಶ | Kannada Prabha

ಸಾರಾಂಶ

2024-25ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೈಕ್ರೋ ಮೂಲಭೂತ ಸೌಕರ್ಯ (ಸಾಮಾನ್ಯ) ಯೋಜನೆ ಅಡಿಯಲ್ಲಿ ಸೇಡಂ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

2024-25ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೈಕ್ರೋ ಮೂಲಭೂತ ಸೌಕರ್ಯ (ಸಾಮಾನ್ಯ) ಯೋಜನೆ ಅಡಿಯಲ್ಲಿ ಸೇಡಂ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನೆರವೇರಿಸಿದರು.

810 ಲಕ್ಷ ರು. ಮೊತ್ತದಲ್ಲಿ ಸೇಡಂ ಪಟ್ಟಣದ ಬಸವೇಶ್ವರ ವೃತ್ತದಿಂದ ಕೋಡ್ಲಾ ಕ್ರಾಸ್‌ವರೆಗೆ ರಸ್ತೆ ಅಗಲೀಕರಣ ಮತ್ತು ಸರ್ವೀಸ್‌ ರಸ್ತೆ, ಪುಟ್ ಪಾತ್, ಚರಂಡಿ ಕಾಮಗಾರಿ, 800 ಲಕ್ಷ ರು. ವೆಚ್ಚದಲ್ಲಿ ಸೇಡಂ ಪಟ್ಟಣದ ಬಸವೇಶ್ವರ ವೃತ್ತದಿಂದ ಕೋಡ್ಲಾ ಕ್ರಾಸ್‌ವರೆಗೆ ರಸ್ತೆ ಅಗಲೀಕರಣ ಕಾಮಗಾರಿ, 250 ಲಕ್ಷ ರು. ವೆಚ್ಚದಲ್ಲಿ ಸೇಡಂ ನಗರದ ಬಸವೇಶ್ವರ ವೃತ್ತದಿಂದ‌ ಹೊಸ ಬಸ್ ನಿಲ್ದಾಣದವರೆಗೆ ರಸ್ತೆ ಸುಧಾರಣೆ ಕಾಮಗಾರಿ ಒಳಗೊಂಡಿವೆ.

ನಗರದ ಬಸವೇಶ್ವರ ವೃತ್ತದಿಂದ ನೂತನ ಬಸ್ ನಿಲ್ದಾಣದವರೆಗೆ ರಸ್ತೆ ಸುಧಾರಣೆ, ಬೀದಿ ದೀಪ, ಚರಂಡಿ ಒಳಗೊಂಡ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದೂ ಡಾ. ಶರಣಪ್ರಕಾಶ ಪಾಟೀಲ್‌ ಹೇಳಿದರು.

ಈಗಾಗಲೇ ಸೇಡಂ ನಗರದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಶೈಕ್ಷಣಿಕ ಪ್ರಗತಿಗಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲಾಗಿದೆ.

ಸರ್ಕಾರ ಜನಪರ ಗ್ಯಾರಂಟಿ ಯೋಜನೆ ನೀಡುವ ಜನರ ಸರ್ವತೋಮುಖ ಅಭಿವೃದ್ಧಿಯ ಜೊತೆಗೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾದರಿ ರಾಜ್ಯವನ್ನಾಗಿಸಿದೆ ಎಂದು ಡಾ. ಶರಣಪ್ರಕಾಶ ಪಾಟೀಲ್‌ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ : ಶ್ರೀ ಶ್ರೀ
ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ