ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿದ ದಿನದ ಸ್ಮರಣಾರ್ಥ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವದಲ್ಲೇ ಅತ್ಯಂತ ದೊಡ್ಡ ಲಿಖಿತ ಸಂವಿಧಾನಗಳಲ್ಲಿ ಒಂದಾಗಿರುವ ಭಾರತೀಯ ಸಂವಿಧಾನವು ದೇಶದ ಏಕತೆ, ಅಖಂಡತೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮಾರ್ಗದರ್ಶನ ನೀಡುತ್ತಿದೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿರುವ ಭಾರತೀಯ ಸಂವಿಧಾನವು ಸ್ವತಂತ್ರ ಭಾರತದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದೆ ಎಂದು ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿರುವ ಭಾರತೀಯ ಸಂವಿಧಾನವು ಸ್ವತಂತ್ರ ಭಾರತದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದೆ ಎಂದು ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಹೇಳಿದರು.ನಗರದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿದ ದಿನದ ಸ್ಮರಣಾರ್ಥ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವದಲ್ಲೇ ಅತ್ಯಂತ ದೊಡ್ಡ ಲಿಖಿತ ಸಂವಿಧಾನಗಳಲ್ಲಿ ಒಂದಾಗಿರುವ ಭಾರತೀಯ ಸಂವಿಧಾನವು ದೇಶದ ಏಕತೆ, ಅಖಂಡತೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮಾರ್ಗದರ್ಶನ ನೀಡುತ್ತಿದೆ ಎಂದರು.ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಅಭಿವೃದ್ಧಿಗೆ ಸಂವಿಧಾನದ ಆಶಯಗಳು ಅತ್ಯಂತ ಮಹತ್ವದ್ದಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ, ಸಾಮಾಜಿಕ ಸಮಾನತೆಯ ಚಿಂತನೆ ಹಾಗೂ ಮಹಿಳೆಯರ ಹಕ್ಕುಗಳಿಗಾಗಿ ರೂಪಿಸಿದ ಸಾಂವಿಧಾನಿಕ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸುವಲ್ಲಿ ಸಂವಿಧಾನದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.ತಹಸೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿತು. ಬಳಿಕ 1950ರ ಜನವರಿ 26ರಂದು ಅದು ಅಧಿಕೃತವಾಗಿ ಜಾರಿಗೆ ಬಂದ ಹಿನ್ನೆಲೆಯಲ್ಲಿ ಭಾರತ ಗಣರಾಜ್ಯವಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ದೇಶದ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೂ ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದರು.ಸಂವಿಧಾನದಲ್ಲಿರುವ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಬೇಕು. ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆ, ಸಹಬಾಳ್ವೆ ಹಾಗೂ ಸಹೋದರತ್ವದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶಿವಮೂರ್ತಿ, ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕೃಷ್ಣಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.