ವಿವಿ ಸಾಗರ ಜಲಾಶಯಕ್ಕೆ ಸಚಿವ ಸುಧಾಕರ್ ಬಾಗಿನ ಅರ್ಪಣೆ

KannadaprabhaNewsNetwork |  
Published : Jan 05, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ  ಲೀಡ್         | Kannada Prabha

ಸಾರಾಂಶ

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭಾನುವಾರ ಭರ್ತಿಯಾಗಿರುವ ವಿವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದರು. ಶಾಸಕರಾದ ಚಂದ್ರಪ್ಪ, ಬಿ.ಜಿ.ಗೋವಿಂದಪ್ಪ, ಟ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಎಫ್.ಎಚ್.ಲಮಾಣಿ ಇದ್ದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾದ ಹಿನ್ನಲೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಭಾನುವಾರ ಬಾಗಿನ ಅರ್ಪಣೆ ಮಾಡಿದರು.

ತರಹೇವಾರಿ ಪುಷ್ಪಗಳಿಂದ ಅಲಂಕಾರಗೊಂಡಿದ್ದ ವಿವಿ ಸಾಗರ ಜಲಾಶಯದ ಅಣೆಕಟ್ಟೆ ಮೇಲಿಂದ ಸಚಿವ ಡಿ.ಸುಧಾಕರ್ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ ಸೇರಿದಂತೆ ವಿವಿಧ ಗಣ್ಯರು ಪುಷ್ಪಾರ್ಚನೆ ಮಾಡಿ, ಹಾಲುತುಪ್ಪ ಸುರಿದು, ಬಾಗಿನ ಅರ್ಪಿಸಿ ಗಂಗೆಗೆ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಳೆದ 2025ರ ಜನವರಿಯಲ್ಲಿ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ನಂತರ ಅಕ್ಟೋಬರ್ ನಲ್ಲಿಯೇ ಮತ್ತೊಮ್ಮೆ ಜಲಾಶಯ ಭರ್ತಿಯಾಗಿತ್ತು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಂದ ಜಲಾಶಯಕ್ಕೆ ಕಳೆದ ಡಿಸೆಂಬರ್‌ ನಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸಲು ಪ್ರಯತ್ನ ನಡೆಸಲಾಗಿತ್ತು. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಮಯ ಅಭಾವದ ಕಾರಣ ಇಂದು ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಬಾಗಿನ ಅರ್ಪಿಸಲಾಗಿದೆ. ಒಂದೇ ವರ್ಷದಲ್ಲಿಯೇ ಎರಡು ಬಾರಿ ವಿವಿ ಸಾಗರ ಜಲಾಶಯ ಭರ್ತಿಯಾಗಿರುವುದು ಜಿಲ್ಲೆಯ ಜನರಿಗೆ ತುಂಬಾ ಹರ್ಷ ತಂದಿದೆ ಎಂದರು.

ವಾಣಿ ವಿಲಾಸ ಜಲಾಶಯದ ಹಿನ್ನೀರಿನಿಂದಾಗಿ ಹೊಸದುರ್ಗ ರೈತರ ಸಮಸ್ಯೆ ಬಗೆಹರಿಸುವ ಸಂಬಂಧ ಕಳೆದ ತಿಂಗಳು ಜಿಲ್ಲೆಯ ಶಾಸಕರು ಹಾಗೂ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಲಾಖಾ ಅಧಿಕಾರಿಗಳು ರೂಪುರೇಷೆ ಸಿದ್ದಪಡಿಸಿದ್ದು, ವಿವಿ ಸಾಗರ ಜಲಾಶಯದ ಹಿನ್ನೀರಿನಿಂದಾಗಿ ರೈತರು ಅನುಭವಿಸುವ ತೊಂದರೆಗಳ ನಿವಾರಣೆ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಹೊಸದುರ್ಗ ತಾಲೂಕಿನ 920 ರೈತರಿಗೆ ಪರಿಹಾರ ವಿತರಣೆ ಮಾಡಲು ಈಗಾಗಲೇ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಕೆರೆ, ರಸ್ತೆ, ಸೇತುವೆ ರಿಪೇರಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಡಾ.ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಫ್.ಎಚ್.ಲಮಾಣಿ, ಅಧೀಕ್ಷಕ ಇಂಜಿನಿಯರ್ ಹರೀಶ್ ಕೆ.ಟಿ, ಕಾರ್ಯಪಾಲಕ ಎಂಜಿನಿಯರ್ ಚಂದ್ರಪ್ಪ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಫೀರ್‌, ರೈತ ಮುಖಂಡ ಹೊರಕೇರಪ್ಪ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ