ಮುಧೋಳ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರು ಸಾಧನೆಯನ್ನು ಪ್ರಶಂಸಿರುವ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು, ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿರುವುದಕ್ಕೆ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.ಇದೆ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆ ಮಕ್ಕಳ ಸಾಧನೆಗಾಗಿ ಶ್ರಮಿಸಿದ ಎಲ್ಲ ಶಿಕ್ಷಕರಿಗೂ, ಶಿಕ್ಷಣ ಇಲಾಖೆಗೂ, ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಸಚಿವರು ಅಭಿನಂದಿಸಿದರು. ನಮ್ಮ ತಾಲೂಕಿಗೆ ಮತ್ತು ಜಿಲ್ಲೆಗೆ ಇಡೀ ರಾಜ್ಯಕ್ಕೆ ಕೀರ್ತಿ ತಂದಿರುವ ಅಂಕಿತಾ ಕೊಣ್ಣೂರಗೆ ಶುಭ ಕೋರಿದರು.