ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಚಿವ ತಿಮ್ಮಾಪೂರ ಕರೆ

KannadaprabhaNewsNetwork |  
Published : Sep 17, 2024, 12:46 AM IST
(ಪೊಟೋ 15ಬಿಕೆಟಿ1, (3) ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು.) | Kannada Prabha

ಸಾರಾಂಶ

ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮತದಾನ ಮೌಲ್ಯದ ಮಹತ್ವವನ್ನು ಮನೆ ಮನೆಗೆ ತೆರಳಿ ಪ್ರತಿಯೊಂದು ಹಂತದಲ್ಲಿ ತಿಳಿಸುವ ಕಾರ್ಯವಾಗಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮತದಾನ ಮೌಲ್ಯದ ಮಹತ್ವವನ್ನು ಮನೆ ಮನೆಗೆ ತೆರಳಿ ಪ್ರತಿಯೊಂದು ಹಂತದಲ್ಲಿ ತಿಳಿಸುವ ಕಾರ್ಯವಾಗಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು.

ಜಿಲ್ಲಾಡಳಿತ ಭವನದ ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದೆ ಎಂದರು.ರಾಜ ಮಹಾರಾಜರ ಕಾಲದಲ್ಲಿ ರಾಜ ಮನೆತನದವರೇ ರಾಜನಾಗಬೇಕಿತ್ತು. ಆದರೆ ಈ ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಓರ್ವ ಸಾಮಾನ್ಯ ವ್ಯಕ್ತಿ ಸಹ ಈ ದೇಶದ ಪ್ರಧಾನಮಂತ್ರಿ, ರಾಜ್ಯದ ಮುಖ್ಯಮಂತ್ರಿಯಾಗಬಹುದು. ಅಂತಹ ಅದ್ಭುತ್‌ವಾದ ಶಕ್ತಿ ನಮ್ಮ ಪ್ರಜಾಪ್ರಭುತ್ವಕ್ಕಿದೆ. ಭಾರತದ ಸಂವಿಧಾನ ವಿಶ್ವ ಶ್ರೇಷ್ಠ ಸಂವಿಧಾನವೆಂದು ಹೆಮ್ಮೆಯಿಂದ ಹೇಳುವಂತಹದ್ದಾಗಿದೆ. ರಾಜ್ಯದ ಬೀದರಿಂದ ಹಿಡಿದು ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿದೆ. ಇದರ ಉದ್ದೇಶ ಸಂವಿಧಾನವನ್ನು ಇನ್ನು ಗಟ್ಟಿಗೊಳಿಸಲು, ಅದರ ಅರಿವು ಮೂಡಿಸುವುದಾಗಿದೆ ಎಂದು ಹೇಳಿದರು.ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲ ಇದರ ಆಸೆ ಪೂರೈಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ 2500 ಕಿ.ಮೀವರೆಗೆ ಮಾನವ ಸರಪಳಿ ಮಾಡಿ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸಲು ಅದರ ತತ್ವ, ವಿಚಾರಗಳನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡಿದೆ. ಪ್ರಮುಖವಾಗಿ ವ್ಯವಸ್ಥೆಯ ಮಹತ್ವ ಜನರಲ್ಲಿ ತಿಳಿಸುವುದಾಗಿದೆ ಎಂದರು. ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಮಾತನಾಡಿ, ದೇಶಕ್ಕೆ ಅರ್ಥಪೂರ್ಣವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್‌ ನೀಡಿದ್ದು, ಅದರಲ್ಲಿ ಅಡಕವಾಗಿರುವ ಆಶಯ, ಅದರ ಹಿಂದೆ ಇರುವ ಸಾಮಾಜಿಕ ಕಳಕಳಿ, ಸಮಾನತೆ, ಭಾತೃತ್ವ ಸೇರಿದಂತೆ ಹತ್ತು ಹಲವಾರು ಮೌಲ್ಯಗಳನ್ನು ನಾವೆಲ್ಲರೂ ಅನುಸರಿಬೇಕು ಎಂದರು. ವಿಧಾನ ಪರಿಷತ್ ಸದಸ್ ಪಿ.ಎಚ್.ಪೂಜಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಕಾರ್ಯಕ್ರಮದ ಪೂರ್ವದಲ್ಲಿ ನಾಡಗೀತೆ ಹಾಡಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು. ಇದೇ ರೀತಿಯಲ್ಲಿ ಆಲಮಟ್ಟಿಯಿಂದ ಸಾಲಹಳ್ಳಿಯವರೆಗೆ ನಿರ್ಮಿಸಲಾದ ಮಾನವ ಸರಪಳಿಯಲ್ಲಿ ಘೋಷಣೆ ಕೂಗಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪಂಗಡದ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV

Recommended Stories

ದಸರಾ ಹಬ್ಬ ಅದ್ಧೂರಿ ಆಚರಣೆಗೆ ಎಲ್ಲರೂ ಸಹಕರಿಸಿ: ಏಗಪ್ಪ ಸವದಿ
ಬಿಡಿಸಿಸಿ ಬ್ಯಾಂಕ್‌ ಹಿತರಕ್ಷಣೆಗೆ ನಾವು ಬದ್ಧ