ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ

KannadaprabhaNewsNetwork |  
Published : Nov 15, 2026, 02:30 AM IST
14ಕ್ರೈಸ್ತ | Kannada Prabha

ಸಾರಾಂಶ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ನಿಯೋಗವು ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಸಮುದಾಯ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯ ಚರ್ಚೆ ನಡೆಸಿತು.

ಉಡುಪಿ: ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ನಿಯೋಗವು ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಸಮುದಾಯ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯ ಚರ್ಚೆ ನಡೆಸಿತು. ಕ್ರೈಸ್ತ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ, ಸಮುದಾಯದ ಕಲ್ಯಾಣ ಯೋಜನೆ, ವಿವಿಧ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನದ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭ ಮತಾಂತರ ನಿಷೇಧ ಕಾಯ್ದೆಯ ಚರ್ಚೆ ನಡೆಸಲಾಯಿತು. ಈ ವಿಷಯದಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಕ್ರೈಸ್ತ ಸಮುದಾಯದ ನಿಲುವನ್ನು ಸಚಿವರ ಗಮನಕ್ಕೆ ತರಲಾಯಿತು. ನಿಯೋಗದ ಸದಸ್ಯರು ಅಹವಾಲು ಆಲಿಸಿದ ಸಚಿವರು ಕ್ರೈಸ್ತ ಸಮುದಾಯದ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಗಳಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ. ಎಸ್. ಜಾಫೆಟ್, ಉಪಾಧ್ಯಕ್ಷೆ ವಿನಿಷಾ ನೀರೋ, ನಿರ್ದೇಶಕರಾದ ಪ್ರಶಾಂತ್ ಜತ್ತನ್ನ, ಹರ್ಷ ಮೆಲ್ವಿನ್ ಲಸ್ರಾದೋ, ರವಿಕುಮಾರ್ ಬಳ್ಳಾರಿ, ಮೈಸೂರಿನ ಸಂದೀಪ್ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ