ಪಶು ಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವ ವೆಂಕಟೇಶ್ ಕೆ. ಅವರು ಬುಧವಾರ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟಕ್ಕೆ ಭೇಟಿ ನೀಡಿದರು.
ಮಂಗಳೂರು: ಪಶು ಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವ ವೆಂಕಟೇಶ್ ಕೆ. ಅವರು ಬುಧವಾರ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಕೆ. ಮತ್ತು ಮಾಜಿ ಸಚಿವ ಅಭಯಚಂದ್ರ ಜೈನ್ಒ, ಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹಗ್ಡೆ, ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, ನಿರ್ದೇಶಕರಾದ ಸುಚರಿತ ಶೆಟ್ಟಿ, ಸುಧಾಕರ ಶೆಟ್ಟಿ, ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಮತ್ತು ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಇದ್ದರು.
ಒಕ್ಕೂಟದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದ ಸಚಿವ ವೆಂಕಟೇಶ್, ರಾಜ್ಯದಲ್ಲಿ ಅತಿ ಹೆಚ್ಚು ದರವನ್ನು ರೈತರಿಗೆ ನೀಡುವ ಒಕ್ಕೂಟ ಇದು ಎಂದು ಶ್ಲಾಘಿಸಿದರು.
ಇದೇ ವೇಳೆ ಮಂಗಳೂರು ಕೇಂದ್ರ ಕಚೇರಿಯ ಲೀಸ್‌ನ ಜಾಗವನ್ನು ಶಾಶ್ವತವಾಗಿ ಒಕ್ಕೂಟಕ್ಕೆ ನೀಡಲು ಹಾಗೂ ಹಾಲಿನ ಮಾರಾಟ ದರವನ್ನು 2 ರು.ಗೆ ಹೆಚ್ಚಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಅಧ್ಯಕ್ಷ ರವಿರಾಜ ಹೆಗ್ಡೆ ಸಚಿವರನ್ನು ವಿನಂತಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.