ಮಂಗಳೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ರ್ಟ್ ಸಿಟಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಗುಂಡೂರಾವ್ವ್
ಕನ್ನಡಪ್ರಭ ವಾರ್ತೆ ಮಂಗಳೂರು
ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಮೊದಲು ಜೆಪ್ಪು ರೈಲ್ವೆ ಅಂಡರ್‌ಪಾಸ್ ವೀಕ್ಷಿಸಿದ ಸಚಿವರು, ಬಳಿಕ ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್‌ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಪರಿಶೀಲಿಸಿದರು. ಈ ರಸ್ತೆ ಅಭಿವೃದ್ಧಿಯಿಂದ ದಕ್ಷಿಣ ಭಾಗದಿಂದ ನಗರ ಪ್ರವೇಶಕ್ಕೆ ಸಂಚಾರ ಸುಗಮವಾಗಲಿದೆ ಎಂದು ಸಚಿವರು ತಿಳಿಸಿದರು.ಬಳಿಕ ವಾಟರ್‌ಫ್ರಂಟ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ವಾಟರ್ ಫ್ರಂಟ್ ರಸ್ತೆ ಕಾಮಗಾರಿಯನ್ನು ಮೋರ್ಗನ್ ಗೇಟ್, ಮುಳಿಹಿತ್ಲು ಮತ್ತು ಬೋಳಾರ ಲೀವೆಲ್‌ಗೆ ಖುದ್ದು ತೆರಳಿ ವೀಕ್ಷಿಸಿದರು. ವಾಟರ್ ಫ್ರಂಟ್ ರಸ್ತೆ ನಿರ್ಮಾಣಗೊಳ್ಳಲಿರುವ ಪ್ರದೇಶದಲ್ಲಿ ಸುಮಾರು ಒಂದು ಕಿ.ಮೀ.ನಷ್ಟು ನಡೆದುಕೊಂಡು ಹೋದ ಸಚಿವರು, ಸ್ಥಳೀಯರೊಂದಿಗೂ ಮಾತನಾಡಿ, ಅಹವಾಲು ಆಲಿಸಿದರು. ನದಿ ತೀರದಲ್ಲಿ ವೀನುಗಾರಿಕೆ ಮಾಡುತ್ತಾ ನೆಲೆಸಿರುವ ಶಿಳ್ಳೆ ಕ್ಯಾತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.
ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ವಾಟರ್ ಫ್ರಂಟ್ ಕಾಮಗಾರಿಗೆ ಕೆಲವೆಡೆ ಸಮಸ್ಯೆಗಳು ಉಂಟಾಗಿವೆ. ಕಾಮಗಾರಿ ಟೆಂಡರ್ ಅಂತಿಮಗೊಳ್ಳುವ ಮೊದಲೇ ಇದನ್ನು ಬಗೆಹರಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ಜಮೀನು ಬಳಕೆದಾರರೊಂದಿಗೆ ಮಾತುಕತೆ ನಡೆಸಿ, ಯೋಜನೆಗೆ ಸಹಕರಿಸಲು ಕೋರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಯೋಜನೆಗೆ ಸಂಪರ್ಕ ರಸ್ತೆ, ಪಾರ್ಕಿಂಗ್ ಮತ್ತಿತರ ಕಾಮಗಾರಿಗಳಿಗೂ ಆದ್ಯತೆ ನೀಡಲು ಸೂಚಿಸಿದರು.ವಾಟರ್ ಫ್ರಂಟ್ ಕಾಮಗಾರಿಗೆ ಬಂದರು ಇಲಾಖೆ ಈಗಾಗಲೇ ನಿರಕ್ಷೇಪಣೆ ಪತ್ರ ನೀಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಚಿವರಿಗೆ ಮಾಹಿತಿ ನೀಡಿದರು.ಶಾಸಕರಾದ ಹರೀಶ್ ಕುಮಾರ್, ಮಂಜುನಾಥ ಭಂಢಾರಿ, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಆನಂದ್, ಸ್ಮಾರ್ಟ್ ಸಿಟಿ ಎಂಡಿ ರಾಜು, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಕುಮಾರ್ ಆಳ್ವ, ಎ.ಸಿ. ವಿನಯರಾಜ್ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.